ಬೀದರ್: ಜಿಲ್ಲೆಯಲ್ಲಿ ಕೊರೊನಾ ವಿರುದ್ಧ ಹೋರಾಟ ಮುಂದುವರೆದಿದ್ದು, ಮಂಗಳವಾರ 75 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದೇ ವೇಳೆ 50 ಜನರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ. ಜಿಲ್ಲೆಯ ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ, ಔರಾದ್ ಹಾಗೂ ಬೀದರ್ ತಾಲೂಕಿನಲ್ಲಿ ಸೋಂಕಿತರು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.
ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆಗಿಂತ ಗುಣಮುಖ ಆಗುತ್ತೊಇರುವವರ ಸಂಖ್ಯೆ ಹೆಚ್ಚಾಗಿ ಕಂಡು ಬಂದಿದೆ. ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 5,890ಕ್ಕೆ ಏರಿಕೆಯಾಗಿದ್ದು ಗುಣಮುಖರಾದವರ ಸಂಖ್ಯೆ 5,303ಕ್ಕೆ ತಲುಪಿದೆ. ಅಲ್ಲದೆ 149 ಜನರು ಸಾವನಪ್ಪಿದ್ದು, ಇನ್ನೂ 434 ಪ್ರಕರಣಗಳು ಸಕ್ರಿಯವಾಗಿವೆ.