ಬೀದರ್ : ಕೊರೊನಾ ಸೋಂಕು ತಡೆಗೆ ಹಾಕಲಾಗಿದ್ದ ಲಾಕ್ಡೌನ್ನ ಈಗ ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ನಾಳೆಯಿಂದ ಜಿಲ್ಲೆಯಾದ್ಯಂತ ಸ್ವಲ್ಪಮಟ್ಟಿನ ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಿಸಲಾಗಿದೆ. ಸಂಜೆ 7 ಗಂಟೆಯಿಂಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತೆ.
ಅಲ್ಲದೇ ವಿಕೇಂಡ್ ಕರ್ಫ್ಯೂ ಕೂಡ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಅನಗತ್ಯ ಗುಂಪು ಸೇರುವುದು, ಓಡಾಡುವುದನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೂಡ್ಲಿಗಿ ಬಳಿ ಭೀಕರ ಅಪಘಾತ: ನವವಿವಾಹಿತ ಸಿವಿಲ್ ಇಂಜಿನಿಯರ್ ಸ್ಥಳದಲ್ಲೇ ಸಾವು
ಕಳೆದ ಲಾಕ್ಡೌನ್ ವೇಳೆಯಲ್ಲಿ ಜನರು ಒಮ್ಮೆಲೆ ಬೀದಿಗೆ ಬಂದಿದ್ದರಿಂದ ಕೊರೊನಾ ಸೋಂಕು ವ್ಯಾಪಕವಾಗಿದೆ. ಹಾಗಾಗಿ, ನಿರ್ಲಕ್ಷ್ಯತನ ಬೇಡವೇ ಬೇಡ. ಕೊರೊನಾ ನಮ್ಮನ್ನು ಬಿಟ್ಟು ಹೋಗಿಲ್ಲ. ಆದರೆ, ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಮ್ಮಿಯಾಗಿದೆ ಅಷ್ಟೇ.. ಹೀಗಾಗಿ, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.