ಬೀದರ್: ಕೃಷಿಗಾಗಿ ಮಾಡಿಕೊಂಡ ಸಾಲ ತಿರಿಸಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಠಾಣಾಕುಶನೂರ್ ಗ್ರಾಮದಲ್ಲಿ ನಡೆದಿದೆ.
ಠಾಣಾಕುಶನೂರ್ ಗ್ರಾಮದ ಗುರನಾಥ್ ಮರ್ತೂರೆ ಎಂಬುವವರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ವಿವಿಧ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಸಾಲದ ಹೊರೆಯಿಂದ ಬಳಲುತ್ತಿದ್ದ ರೈತ ಹೊಲದಲ್ಲಿ ಕ್ರೀಮಿನಾಶಕ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಠಾಣಾಕುಶನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.