ETV Bharat / state

ಹುಮನಾಬಾದ್: ಮಳೆ ಪೀಡಿತ ಪ್ರದೇಶಗಳಿಗೆ ಶಾಸಕ, ಜಿಲ್ಲಾಧಿಕಾರಿಗಳ ತಂಡ ಭೇಟಿ...! - MLA Rajashekar Patil

ಜಿಲ್ಲೆಯ ಹುಮನಾಬಾದ್ ತಾಲೂಕಿನ ಅಲ್ಲೂರು, ನಿಂಬೂರ್, ಬೋತಗಿ, ನಂದಗಾಂವ್ ಸೇರಿದಂತೆ 11 ಗ್ರಾಮಗಳಲ್ಲಿ ಮಳೆ ಮಾಡಿದ ಅವಾಂತರವನ್ನು ಶಾಸಕ ರಾಜಶೇಖರ್ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದರು.

Inspection
ಪರಿಶೀಲನೆ
author img

By

Published : Sep 15, 2020, 10:59 PM IST

ಬೀದರ್: ಧಾರಾಕಾರ ಮಳೆಯಿಂದ ಹುಮನಾಬಾದ್ ತಾಲೂಕಿನ 11 ಗ್ರಾಮಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವಾಗಿದ್ದು, ಸ್ಥಳಕ್ಕೆ ಶಾಸಕ ರಾಜಶೇಖರ್ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಹುಮನಾಬಾದ್ ತಾಲೂಕಿನ ಅಲ್ಲೂರು, ನಿಂಬೂರ್, ಬೋತಗಿ, ನಂದಗಾಂವ್ ಸೇರಿದಂತೆ 11 ಗ್ರಾಮಗಳಲ್ಲಿ ಮಳೆ ಮಾಡಿದ ಅವಾಂತರವನ್ನು ಪರಿಶೀಲನೆ ನಡೆಸಿ ಹಾನಿಗೊಳಗಾದ ರೈತರ, ಜಮೀನು, ಬೆಳೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಯ ಸಮಗ್ರ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಸೂಚನೆ ನೀಡಿದರು.

ಮಳೆ ಪೀಡಿತ ಪ್ರದೇಶಗಳಿಗೆ ಶಾಸಕ, ಜಿಲ್ಲಾಧಿಕಾರಿಗಳ ತಂಡ ಭೇಟಿ

ರಾತ್ರಿಯಿಡೀ ಸುರಿದ ಮಳೆಗೆ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದ್ದು, ಭಾರಿ ಪ್ರಮಾಣದಲ್ಲಿ ನಾಶವಾಗಿದೆ ಇದರಿಂದ ನಾವು ಸಂಕಷ್ಟದಲ್ಲಿದ್ದೇವೆ ಅಲ್ಲದೆ ಮುಂಗಾರು ಬೆಳೆಯನ್ನು ಕಳೆದುಕೊಂಡು ಕಂಗಾಲಾಗಿದ್ದೇವೆ ಎಂದು ಸ್ಥಳಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ರಾಜಶೇಖರ್ ಪಾಟೀಲ್ ಅವರು, ರೈತರ ನಷ್ಟ ಪರಿಶೀಲನೆ ನಡೆಸಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.