ಬೀದರ್: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಂದು ಆರು ಮಂದಿಯಲ್ಲಿ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಈ ಪೈಕಿ ಈಗಾಗಲೇ 251 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೀದರ್ನ ಕಟೈನ್ಮೆಂಟ್ ಏರಿಯಾದ 55 ವರ್ಷದ ವ್ಯಕ್ತಿಯೊಬ್ಬರು ಜೂನ್ 17ರಂದು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.