ETV Bharat / state

ಬೀದರ್ ಪೊಲೀಸರ ಕಾರ್ಯಾಚರಣೆ: 11 ಆರೋಪಿಗಳು ಸೆರೆ, ₹52 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ಜಪ್ತಿ - bike seized

ಬೀದರ್ ಜಿಲ್ಲೆಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Seized bike, gold jewellery
ಜಪ್ತಿ ಮಾಡಲಾದ ಬೈಕ್​, ಚಿನ್ನಾಭರಣಗಳು
author img

By ETV Bharat Karnataka Team

Published : Oct 8, 2023, 11:56 AM IST

ಬೀದರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ 14 ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹನ್ನೊಂದು ಆರೋಪಿಗಳನ್ನು ಬಂಧಿಸಿ, 52,37,700 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ತಿಳಿಸಿದರು.

ಶನಿವಾರ ಬೀದರ್ ಎಸ್ಪಿ ಕಚೇರಿ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇತ್ತೀಚೆಗೆ ಬೈಕ್ ಕಳ್ಳತನ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಕರಣಗಳ ತಡೆ ಹಾಗೂ ಪತ್ತೆಗೆ ಇಲಾಖೆಯು ರೌಡಿ ನಿಗ್ರಹ ದಳ ರಚಿಸಿದೆ. ಈ ತಂಡವು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಗಾಂಧಿಗಂಜ ಠಾಣೆಯಲ್ಲಿ ಆರೋಪಿಗಳ ವಿರುದ್ಧ 4 ಪ್ರಕರಣಗಳು ದಾಖಲಾಗಿದ್ದು, 40,15,000 ರೂ ಮೌಲ್ಯದ 41 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಔರಾದ್​ನಲ್ಲಿ ನಡೆದ ಎರಡು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, 1,200 ರೂಪಾಯಿ ಹಾಗೂ 2,50,000 ರೂಪಾಯಿ ಮೌಲ್ಯದ 8 ಮೋಟಾರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಹುಮನಾಬಾದ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, 2,55,000 ಲಕ್ಷ ರೂ ಮೌಲ್ಯದ 4 ತೊಲೆ 8 ಗ್ರಾಂ ಬಂಗಾರದ ಆಭರಣ, 80 ಸಾವಿರ ರೂ ಬೆಲೆಯ ಹೊಂಡಾ ಯುನಿಕಾರ್ನ್ ಮೋಟರ್ ಸೈಕಲ್ ಹಾಗೂ 1,36,700 ರೂ ಮೌಲ್ಯದ 17 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಬಸವಕಲ್ಯಾಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಆರೋಪಿಗಳನ್ನು ಬಂಧಿಸಿದ್ದು ಬಂಗಾರ, ಬೆಳ್ಳಿ ಹಾಗೂ 9 ಬಾವಿಯ ಮೋಟಾರ್ ಪಂಪ್​​ಸೆಟ್‌ಗಳು, ನಗದು ಹಣ 5 ಸಾವಿರ ಸೇರಿ ಒಟ್ಟು 4,94,800 ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ್ ಉಪ ಪೊಲೀಸ್ ಅಧೀಕ್ಷಕ ಶಿವನಗೌಡ ಪಾಟೀಲ್, ಹುಮನಾಬಾದ ಉಪ ಪೊಲೀಸ್ ಅಧೀಕ್ಷಕ ಜೆ.ಎಸ್.ನ್ಯಾಮಗೌಡರ ಸೇರಿದಂತೆ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿ : ಅಸಲಿಯೆಂದು ನಕಲಿ ಚಿನ್ನದ ನಾಣ್ಯ ನೀಡಿ ₹ 45 ಲಕ್ಷ ವಂಚನೆ ಕೇಸ್​.. ದಾವಣಗೆರೆಯಲ್ಲಿ ಇಬ್ಬರು ಖದೀಮರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.