ಬೀದರ್ : ಚುನಾವಣಾ ಆಯೋಗದ ನಿರ್ದೇಶನದಂತೆ ಪತದಾರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಅಕ್ಟೋಬರ್ 15 ರೋಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದಲ್ಲಿ ಮತದಾರ ಪಟ್ಟಿಯಿಂದ ನಿಮ್ಮ ಹೆಸರು ನಾಪತ್ತೆಯಾಗಬಹುದು ಎಂದು ಬೀದರ್ ಜಿಲ್ಲಾಧಿಕಾರಿ ಡಾ. ಎಚ್. ಆರ್ ಮಹಾದೇವ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು 'ಈಟಿವಿ ಭಾರತ' ಜತೆ ಮಾತನಾಡಿದ ಅವರು ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಜಾರಿಯಲ್ಲಿದೆ. ಬಿಎಲ್ಒಗಳು, ಅಂಗನವಾಡಿ ಕಾರ್ಯಕರ್ತೆಯರು ಅಥವಾ ಪಂಚಾಯತ್ ನೌಕರರು ಈ ನಿರ್ವಹಿಸುತ್ತಿದ್ದಾರೆ. ಮತದಾರರು ಮತದಾನ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯೊಂದಿಗೆ ಪಡಿತರ ಚೀಟಿ, ಅಥವಾ ಆಧಾರ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕಾಗಿದೆ.
ಈ ರೀತಿ ದಾಖಲೆಗಳು ಕೊಡದೇ ಇದ್ದಾಗ ಮತದಾರ ಪಟ್ಟಿಯಿಂದ ಹೆಸರು ಡಿಲಿಟ್ ಆಗಬಹುದು. ಹೀಗಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.