ETV Bharat / state

'ಬಿದರಿ' ಸಂಗೀತೋತ್ಸವ: ರೇಖಾ ಸೌದಿ ಹಾಡಿಗೆ ಹುಚ್ಚೆದ್ದು ಕುಣಿದ ಪ್ರೇಕ್ಷಕರು - ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೇಖಾ ಸೌದಿ ಗಾಯನ

ಬೀದರ್ ನಗರದ ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ಗಾಯಕಿ ರೇಖಾ ಸೌದಿ ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದರು.

bidari sangisthosthava programme in bidar
ಗಾಯಕಿ ರೇಖಾ ಸೌದಿ ಗಾಯನ
author img

By

Published : Feb 15, 2021, 8:23 AM IST

ಬೀದರ್: ಜಿಲ್ಲೆಯ ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಖ್ಯಾತ ಗಾಯಕಿ ರೇಖಾ ಸೌದಿಯವರ ಸಂಗೀತ ರಸಮಂಜರಿ ಪ್ರೇಕ್ಷಕರ ಮನ ರಂಜಿಸಿತು.

ಪ್ರೇಕ್ಷಕರನ್ನು ರಂಜಿಸಿದ ಗಾಯಕಿ ರೇಖಾ ಸೌದಿ ಹಾಡು
ನಗರದ ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಉದ್ಘಾಟಿಸಿದರು. ಈ ವೇಳೆ ಖ್ಯಾತ ಸಂಗೀತ ತಜ್ಞ ವೈಕುಂಠದತ್ತ ಮಹಾರಾಜರಿಗೆ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳಿಂದ ವಯೋವೃದ್ಧರವರೆಗೆ ಸ್ಪರ್ಧಾರ್ಥಿಗಳು ಗಾಯನದ ಜೊತೆ ನೃತ್ಯ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಗಾಯಕಿ ರೇಖಾ ಸೌದಿ ಅವರ 'ಯಾಕೆ ಬಡಿದಾಡ್ತಿ ತಮ್ಮ ಮಾಯಾ ಮೆಚ್ಚಿ... ಹಾಡಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದರು. ಜಾನಪದ, ಕನ್ನಡ ಸಾಹಿತ್ಯ ಹಾಗೂ ಚಲನಚಿತ್ರದ ಸೂಪರ್ ಹಿಟ್ ಹಾಡುಗಳನ್ನು ವೇದಿಕೆಯಲ್ಲಿ ಹಾಡುವ ಮೂಲಕ ಪ್ರೇಕ್ಷಕರನ್ನು ಅವರು ರಂಜಿಸಿದರು.

ಇದನ್ನೂ ಓದಿ:ಮಗುವಿನ ಚಿಕಿತ್ಸೆಗೆ ಬೇಕಿದೆ ₹16 ಕೋಟಿ.. ದಾನಿಗಳೇ ನೀವೂ ನೆರವಾಗಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.