ಬೀದರ್: ಮನೆ ಮುಂದೆ ನಿಲ್ಲಿಸುವ ಬೈಕ್ಗಳನ್ನೇ ಟಾರ್ಗೆಟ್ ಮಾಡಿ ಎಗರಿಸುತ್ತಿದ್ದ ಕಳ್ಳರ ಕೈಚಳಕ ದಿನೇ ದಿನೇ ಹೆಚ್ಚಾಗುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಗ್ಯಾಂಗ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಮಲ್ಲಿಕಾರ್ಜುನ ಶ್ರೀಮಾಳೆ ಎಂಬುವವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದಿದ್ದಾರೆ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.