ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಶೂಟೌಟ್ ಪ್ರಕರಣ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಹಿಟ್ಲರ್ ಆಡಳಿತದಂತಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರಿನಲ್ಲಿ ನಡೆದ ಪೊಲೀಸರ ಶೂಟೌಟ್ಗೆ ಅಮಾಯಕರು ಬಲಿಯಾಗಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಆದ ಮೇಲೆ ಅಶ್ರು ವಾಯು, ಜಲ ಪ್ರಯೋಗ ಮಾಡಿದ ನಂತರ ಪರಿಸ್ಥಿತಿ ನೋಡಿಕೊಂಡು ಗೊಲಿಬಾರ್ ಮಾಡಬೇಕಿತ್ತು. ಆದ್ರೆ ಮನೆಯಲ್ಲಿದ್ದ ಒಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿರುವುದು ಸರಿಯಲ್ಲ ಎಂದರು.
ಅಲ್ಲದೇ ಮಂಗಳೂರು ಪ್ರವೇಶಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿರ್ಬಂಧ ಹೇರಲಾಗಿದೆ. ಸರ್ಕಾರದ ಅಂಗವಾಗಿರುವ ನಾಯಕರನ್ನೇ ಗಲಭೆ ಪೀಡಿತ ಪ್ರದೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದ್ರೆ ಸಿಎಂ ಯಡಿಯೂರಪ್ಪ ಅವರು ಮಾತ್ರ ಹೋಗಿ ಬರ್ತಿದ್ದಾರೆ. ಹೀಗಾಗಿ ಸರ್ವಾಧಿಕಾರಿ ಹಿಟ್ಲರ್ ಆಡಳಿತದಂತೆ ಬಿಜೆಪಿ ಸರ್ಕಾರ ನಡೆದುಕೊಳ್ತಿದೆ ಎಂದು ಟೀಕಿಸಿದ್ರು.