ಬಸವಕಲ್ಯಾಣ: ಸಾರ್ವಜನಿಕವಾಗಿ ಕಾರ್ಯಕ್ರಮ ಆಯೋಜಿಸದೆ ತಮ್ಮ ತಮ್ಮ ಮನೆಗಳಲ್ಲಿಯೇ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಸವ ಜಯಂತಿ ಆಚರಿಸಬೇಕು ಎಂದು ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಮನವಿ ಮಾಡಿದ್ದಾರೆ.
ಕೊರೊನಾ ಹಾವಳಿ ಮುಗಿದ ನಂತರ ಬಸವಕಲ್ಯಾಣದಲ್ಲಿ ಒಂದು ವಿಶೇಷ ದಿನ ನಿಗದಿಪಡಿಸಿ ಅದ್ಧೂರಿ ಹಾಗೂ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸೇಡಂ ತಿಳಿಸಿದ್ದಾರೆ.