ಬೀದರ್: ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ ಆತ್ಮ ನಿರ್ಭರ ಯೋಜನೆ ಪ್ಯಾಕೇಜ್ ಆಕಾಶದಲ್ಲಿನ ಚುಕ್ಕೆ ಇದ್ದಂತಿದೆ. ಸಾಲ ಕೊಡೋದು ಪರಿಹಾರವಾದ್ರೆ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹೇಗೆ ಸಾಧ್ಯ ಎಂದರು.
ಅಲ್ಲದೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 17,000 ಕೋಟಿ ರೂಪಾಯಿ ಪ್ಯಾಕೇಜ್ನಲ್ಲಿನ ಒಂದು ನಯಾ ಪೈಸೆ ಕೂಡ ಕೊರೊನಾ ಸಂಕಷ್ಟಕ್ಕೆ ಸಿಲುಕಿದವರಿಗೆ ಸಿಕ್ಕಿಲ್ಲ. ಇವರು ಬರೀ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.