ಬೀದರ್: ಮುಷ್ಕರ ನಿರತ ಸಾರಿಗೆ ಸಂಸ್ಥೆ ನೌಕರರು ಗೌರಯುತವಾಗಿ ಸೇವೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಮುಷ್ಕರದ ಹೆಸರಿನಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಮಾಡಬಾರದು. ಸೇವೆಗೆ ಹಾಜರಾಗದ ನೌಕರರಿಗೆ ಗೈರು ಹಾಜರಿ ಹಾಕುವಂತೆ ಸೂಚಿಸಲಾಗಿದೆ. ಅಲ್ಲದೇ ಗೈರು ಹಾಜರಾದ ನೌಕರರಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದಿಲ್ಲ. ಇಷ್ಟಕ್ಕೂ ಆಗಲಿಲ್ಲ ಅಂದ್ರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಯಾರದ್ದೋ ಮಾತು ಕೇಳಿ ಮುಷ್ಕರ ಮಾಡುವವರ ಮೇಲೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದಿಂದ ಸಾರಿಗೆ ಸಂಸ್ಥೆಗೆ 2,300 ಕೋಟಿ ರೂ.ನೀಡಿದ್ದೇವೆ. ಕಷ್ಟದ ಕಾಲದಲ್ಲಿ ಹೀಗೆ ಮಾಡೋದು ಸರಿಯಲ್ಲ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.