ಬೀದರ್ : ಸಂಘಟನೆಗಳು ಮಾಡುವ ಅಭಿಯಾನಕ್ಕೆ ಸರ್ಕಾರ ಬೆಂಬಲ ನೀಡುವುದಿಲ್ಲ. ಸರ್ಕಾರ ಕಾನೂನಾತ್ಮಕವಾದ ಕಾರ್ಯಗಳನ್ನಷ್ಟೇ ಮಾಡುತ್ತದೆ ಎಂದು ಬೀದರ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕ್ರೀಡಾಂಗಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಬಿಟ್ ಕಾಯಿನ್ ಬಗ್ಗೆ ರಂದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ದಾಖಲೆಗಳಿದ್ದಲ್ಲಿ ಕೊಡಲಿ. ಟ್ವೀಟ್ ಮಾಡುವುದರಿಂದ ಪ್ರಯೋಜನವಿಲ್ಲ. ದಾಖಲೆಗಳನ್ನು ನೀಡಿದರೆ ಕಾನೂನಾತ್ಮಕ ಕ್ರಮಕ್ಕೆ ಸಹಕಾರಿಯಾಗುತ್ತದೆ ಎಂದರು.
ಇದನ್ನೂ ಓದಿ: 'ಉಚಿತ ಕೊಡುಗೆ' ಘೋಷಿಸಿದ್ದಕ್ಕೆ ರಾಜಕೀಯ ಪಕ್ಷಗಳ ನೋಂದಣಿ ರದ್ದು ಅಸಾಧ್ಯ : ಚುನಾವಣಾ ಆಯೋಗ