ETV Bharat / state

ನೀರಾವರಿ ಯೋಜನೆ ಬಗ್ಗೆ ಚರ್ಚೆ: ಗಜೇಂದ್ರ ಶೇಖಾವತ್​ ಭೇಟಿ ಮಾಡಿದ ಸಿಎಂ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತ್​ ಅವರನ್ನು ಭೇಟಿ ಮಾಡಿ, ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು.

cm-basavaraja-bommai-met-central-minister-gajndra-shekhavat
ನೀರಾವರಿ ಯೋಜನೆ ಬಗ್ಗೆ ಚರ್ಚೆ : ಗಜೇಂದ್ರ ಶೇಖಾವತ್​ ಭೇಟಿ ಮಾಡಿದ ಸಿಎಂ
author img

By

Published : Nov 30, 2022, 10:57 PM IST

ಬೀದರ್ : ನವದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ ಸಚಿವರಾದ ಸನ್ಮಾನ್ಯ ಶ್ರೀ ಗಜೇಂದ್ರ ಶೇಖಾವತ್​ ಅವರನ್ನು ಭೇಟಿ ಮಾಡಿ, ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಜಿಲ್ಲೆಯಲ್ಲಿ ಕೆರೆಗಳ ನಿರ್ಮಾಣ, ಬಂದರು, ಬ್ರೀಡ್ಜ್ ಕಂ ಬ್ಯಾರೇಜ್‍ಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸರ್ಫೆಸ್ ಮೈನರ್ ಇರಿಗೇಷನ್ ಅಡಿ ಬೀದರ್​ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರೂ. 114.61 ಕೋಟಿಯ ಒಟ್ಟು 50 ಕಾಮಗಾರಿಗಳ ಡಿ.ಪಿ.ಆರ್ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಆರ್.ಆರ್.ಆರ್. (ರಿಪೇರ್, ರಿಸ್ಟೋರ್ ಮತ್ತು ರೆಜುವಿನೇಟ್) ಅಡಿಯಲ್ಲಿ ರೂ. 114 ಕೋಟಿಯಡಿ ಒಟ್ಟು 73 ಕಾಮಗಾರಿಗಳ ಡಿ.ಪಿ.ಆರ್. ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಕೆಯಾಗಿರುತ್ತದೆ.

cm-basavaraja-bommai-met-central-minister-gajndra-shekhavat
ನೀರಾವರಿ ಯೋಜನೆ ಬಗ್ಗೆ ಚರ್ಚೆ : ಗಜೇಂದ್ರ ಶೇಖಾವತ್​ ಭೇಟಿ ಮಾಡಿದ ಸಿಎಂ

ಕೂಡಲೆ ನಮ್ಮ ಜಿಲ್ಲೆಯ ಕಾಮಗಾರಿಗಳಿಗೆ ಪ್ರಾತಿನಿಧ್ಯ ನೀಡಿ, ಈ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ರಾಜ್ಯದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಜೇಂದ್ರಸಿಂಗ್ ಶೇಖಾವತ್‍ರವರಿಗೆ ಮನವಿ ಮಾಡಿಕೊಂಡರು.

ಬೀದರ್​​​ ಕ್ಷೇತ್ರವು ಕೃಷಿ ಪ್ರಧಾನವಾದ ಕ್ಷೇತ್ರವಾಗಿದ್ದು, ನಮ್ಮಲ್ಲಿ ಶೇ 60ಕ್ಕಿಂತ ಹೆಚ್ಚು ಜನ ಕೃಷಿಯನ್ನೆ ಅವಲಂಬಿಸಿದ್ದಾರೆ. ಈ ಕಾಮಗಾರಿಗಳ ಪ್ರಾರಂಭದಿಂದ ಬೀದರ್​ ಕ್ಷೇತ್ರದ ನೀರಾವರಿಗೆ ಅನುಕೂಲವಾಗಲಿದೆ ಹಾಗೂ ರೈತರಿಗೆ ಸಹಾಯವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ನಂತರ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರು, ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವರಾದ ನಿತಿನ್​ ಗಡ್ಕರಿಯವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿನ ರಸ್ತೆ ಅಭಿವೃದ್ಧಿ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ ಜೋಷಿ, ರಾಜ್ಯದ ಬೃಹತ್ ಮತ್ತು ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಎಮ್. ಕಾರಜೋಳ, ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ದಿ ಸಕ್ಕರೆ ಹಾಗೂ ಬೀದರ್​​ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಂಕರ ಪಾಟೀಲ್ ಮುನೇನಕೋಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಬಿಗ್ ಪ್ಲಾನ್​​: ಹಿಂದೂ ಅಜೆಂಡಾದ ರ‍್ಯಾಲಿಗಳಿಗೆ ಮೊರೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.