ಬೀದರ್ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾಜಿ ಶಾಸಕ ಎಂ ಜಿ ಮುಳೆ ಅವರನ್ನು ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.
ಇದೇ ವೇಳೆ ಮೂಳೆ ಅವರು ಅಧ್ಯಕ್ಷರಾದರೆ ಮರಾಠ ಸಮಾಜದ ಶೈಕ್ಷಣಿಕ, ಔದ್ಯೋಗಿಕ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಮುಳೆ ದುಡಿಯಲಿದ್ದಾರೆ ಎಂದರು.
ಮತ್ತೊಂದೆಡೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಹೋಬಳಿ ವ್ಯಾಪ್ತಿಯ ಯರಂಡಿ ಗ್ರಾಮದಲ್ಲಿ 8 ಎಕರೆ ಪ್ರದೇಶದಲ್ಲಿ ಶಿವಾಜಿ ಪಾರ್ಕ್ ನಿರ್ಮಾಣ ಮಾಡಲಿಕ್ಕೆ ಸರ್ಕಾರ ಭೂಮಿ ಮಂಜೂರು ಮಾಡಿ ಆದೇಶ ಮಾಡಿದೆ.
ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಹಿರಿಯ ನಟ ಕಲಾತಪಸ್ವಿ ರಾಜೇಶ್...