ETV Bharat / state

ಗಡಿ ಜಿಲ್ಲೆಯಲ್ಲಿ ಕುಮಾರಸ್ವಾಮಿ ವಾಸ್ತವ್ಯ... ಏನೆಲ್ಲಾ ಕಾರ್ಯಕ್ರಮ?

author img

By

Published : Jun 27, 2019, 5:11 AM IST

ಸಿಎಂ ಕುಮಾರಸ್ವಾಮಿ ಇಂದು ಬೀದರ್​ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಜನತಾದರ್ಶನ ಹಾಗೂ ಮನವಿ ಸ್ವೀಕಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಬೀದರ್​ನಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

ಬೀದರ್: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಬೀದರ್​​ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 5 ಗಂಟೆಗೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದ ಹೊರಟು 10 ಗಂಟೆಗೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಜನತಾದರ್ಶನ ಹಾಗೂ ಮನವಿ ಸ್ವೀಕಾರ ಕಾರ್ಯದಲ್ಲಿ ಭಾಗವಹಿಸಲಿದ್ದು, ಸಂಜೆ 6.30ರಿಂದ 8.30 ಗಂಟೆಯವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾತ್ರಿ ಉಜಳಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಇನ್ನು ಜೂನ್​ 28ರ ಬೆಳಗ್ಗೆ 7 ಗಂಟೆಗೆ ಉಜಳಂಬ ಗ್ರಾಮದಿಂದ ರಸ್ತೆ ಮಾರ್ಗವಾಗಿ ಸಿಎಂ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:ಬೀದರ್ ನಲ್ಲಿ ಸಿಎಂ ಕುಮಾರಸ್ವಾಮಿ ಪ್ರವಾಸ ಎಲ್ಲೆಲ್ಲಿ...?

ಬೀದರ್:
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಳ್ಳಲಿದ್ದು ಬೆಳಗ್ಗೆ 5 ಗಂಟೆಗೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದ ರಸ್ತೆ ಮಾರ್ಗವಾಗಿ ಹೊರಟು, 10 ಗಂಟೆಗೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು.

ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಜನತಾದರ್ಶನ - ಮನವಿ ಸ್ವೀಕಾರ ಮತ್ತು ಕುಂದು ಕೊರತೆಗಳ ಆಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6.30ರಿಂದ 8.30 ಗಂಟೆಯವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಮಾಡುವರು. ರಾತ್ರಿ ಉಜಳಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣ ಮಾಡಿರುನ ನೆಲದ ಮೇಲಿನ ವಿಶೇಷ ಚಾಪೆ ಮೇಲೆ ಗ್ರಾಮ ವಾಸ್ತವ್ಯ ಮಾಡುವರು.

ಜೂ.28ರ ಬೆಳಗ್ಗೆ 7 ಗಂಟೆಗೆ ಉಜಳಂಬ ಗ್ರಾಮದಿಂದ ರಸ್ತೆ ಮಾರ್ಗವಾಗಿ ಬೀದರ್ ಏರ್‍ಬೇಸ್‍ಗೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮಾನ್ಯ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Body:AnilConclusion:Bidar
ETV Bharat Logo

Copyright © 2024 Ushodaya Enterprises Pvt. Ltd., All Rights Reserved.