ETV Bharat / state

ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಒಂದು ವಾರದಲ್ಲಿ ಬೇರೆ ಕ್ರಮಗಳ ಬಗ್ಗೆ ನಿರ್ಧಾರ : ಸಿಎಂ - cm yadiyurappa reaction about corona lockdown

ಉಪ ಚುನಾವಣೆ ಹಿನ್ನೆಲೆ ಬೀದರ್​ನಲ್ಲಿ ಸಿಎಂ ಯಡಿಯೂರಪ್ಪ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಕೊರೊನಾ ಪ್ರಕರಣಗಳ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಒಂದು ವಾರದೊಳಗೆ ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದರೆ ಬೇರೆ ಕ್ರಮಗಳ ಬಗ್ಗೆ ನಿರ್ಧಾರಕ್ಕೂ ಬರಲಿದ್ದೇವೆ ಎಂದು ಹೇಳಿದ್ದಾರೆ.

cm yadiyurappa says about lockdown again
ಸಿಎಂ ಬಿಎಸ್ ವೈ ಹೇಳಿಕೆ
author img

By

Published : Apr 12, 2021, 1:22 PM IST

ಬೀದರ್: ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ​ ತಿಳಿಸಿದ್ದಾರೆ.

ಸಿಎಂ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನರು ಸಹಕರಿಸಬೇಕು. ಮಾಸ್ಕ್​ ಹಾಕೋದು ಸ್ಯಾನಿಟೈಸರ್ ಬಳಕೆ ಜೊತೆಗೆ ಸಾಮಾಜಿಕ ಅಂತರ ಕಾಪಾಡಬೇಕು. ಈಗಾಗಲೇ ಅಗತ್ಯವಿದ್ದ ಕಡೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ಒಂದು ವಾರ ಕಾದು ನೋಡ್ತಿವಿ, ಕೊರೊನಾ ಕಂಟ್ರೋಲ್​ಗೆ ಬರದಿದ್ದರೆ, ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದನ್ನು ಯಾರಿಂದಲೂ ತಡೆಯೋಕಾಗಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ‌.

ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಮಾತನಾಡಿದ ಅವರು, ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸ್ತಾರೆ. ಅಲ್ಲದೆ ಮಸ್ಕಿ ಹಾಗೂ ಬೆಳಗಾವಿಯಲ್ಲೂ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿಯೇ ಗೆಲ್ತಾರೆ ಎಂದರು.

ಬಸವಕಲ್ಯಾಣ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿದ್ದು, ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ನೀಡ್ತೇನೆ. ರಸ್ತೆ, ಕೆರೆ ಕಟ್ಟೆಗಳು, ನೀರಾವರಿ ಅಭಿವೃದ್ಧಿ ಮಾಡ್ತೇನೆ ಎಂಬ ಭರವಸೆ ನೀಡಿದರು.

ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಧೂಳಿಪಟವಾಗಲಿದೆ. ಮೂರು ಕ್ಷೇತ್ರಗಳಲ್ಲಿ ಸೋಲಲಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಟೀಕೆ ಮಾಡುವುದಿಲ್ಲ ಆದ್ರೆ, ಕಳೆದ ಲೋಕಸಭೆ ಚುನಾವಣೆ ವೇಳೆಯಲ್ಲಿ ರಾಜ್ಯದಲ್ಲಿ ಒಂದು ಸ್ಥಾನದಲ್ಲಿ ಗೆದ್ದಿದ್ದರು. ಬಿಜೆಪಿ 25 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಖುದ್ದು ಖರ್ಗೆ ಅವರೆ ಸೋತಿದ್ದರು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.