ಬೀದರ್: ಎರಡು ಬೈಕ್ಗಳು ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಹೊರವಲಯದ ಕಮಠಾಣ ರಸ್ತೆಯಲ್ಲಿ ಈ ರಸ್ತೆ ಅಪಘಾತ ನಡೆದಿದೆ. ಸುಲೇಪೇಟ್ ಗ್ರಾಮದ ನಿವಾಸಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.