ETV Bharat / state

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ - Congress protest demanding arrest of K.S. Eshwarappa

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲಾ ಇಲಾಖೆಯಲ್ಲಿ 40% ಕಮಿಷನ್ ದಂಧೆ ನಡೆದಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಹೀಗಾಗಿ, ಈ ಪ್ರಕರಣದ ನ್ಯಾಯಾಂಗ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ..

congress-protest-demanding-arrest-of-ks-eshwarappa
ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
author img

By

Published : Apr 16, 2022, 7:52 PM IST

ಬೀದರ್​ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಮತ್ತು 40% ಕಮಿಷನ್ ಪಡೆದು ಭ್ರಷ್ಟಾಚಾರ ಎಸಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕೆಂದು ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೀದರ್​ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕೆ ಎಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಚೋದನೆ ಹಿನ್ನೆಲೆಯಲ್ಲಿ IPC 306 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 13ಎ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಆದರೆ, ಬಿಜೆಪಿಯವರ ಭ್ರಷ್ಟಾಚಾರ ಹೊರಗೆ ಬರುತ್ತದೆ ಎಂಬ ಕಾರಣಕ್ಕೆ ಉದ್ದೇಶ ಪೂರ್ವಕವಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲಾ ಇಲಾಖೆಯಲ್ಲಿ 40% ಕಮಿಷನ್ ದಂಧೆ ನಡೆದಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಹೀಗಾಗಿ, ಈ ಪ್ರಕರಣದ ನ್ಯಾಯಾಂಗ ತನಿಖೆ ಆಗಬೇಕು. ಸಂತೋಷ್ ಸಾವಿನ ಪ್ರಕರಣದಲ್ಲಿ ಈಶ್ವರಪ್ಪ ಹಾಗೂ ಯಾರ್ಯಾರು ಶಾಮೀಲಾಗಿದ್ದಾರೆ, ಅವರೆಲ್ಲರನ್ನು ಬಂಧಿಸಿ ತನಿಖೆಗೆ ಒಳಪಡಿಸಿ ಶಿಕ್ಷೆ ನೀಡುವ ಮೂಲಕ ಸಂತೋಷ್ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಈಶ್ವರಪ್ಪರನ್ನು ಬಂಧಿಸಿ ಕಾಂಗ್ರೆಸ್ ನಾಯಕರು ಏನು ಮಾಡುತ್ತಾರೆ? ಹೆಚ್​​ಡಿಕೆ ಪ್ರಶ್ನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.