ಬಸವಕಲ್ಯಾಣ (ಬೀದರ್): ಕೊರೊನಾ ನಿಯಂತ್ರಣ ನೆಪದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.
ಕಾಂಗ್ರೆಸ್ ಪದಾಧಿಕಾರಿಗಳನ್ನೊಳಗೊಂಡ ನಿಯೋಗ ನಗರದ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಸಾವಿತ್ರಿ ಸಲಗರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸರ್ಕಾರ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಕೊರೊನಾ ಪರಿಕರಗಳ ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರವಾಗಿದ್ದು, ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು.
ಸರ್ಕಾರ ಕೂಡಲೇ ರೈತ ಹಾಗೂ ಕಾರ್ಮಿಕ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.