ಬೀದರ್: ಇಂದು 42 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ.
ಈ ನಡುವೆ 105 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 4,255ಕ್ಕೆ ಏರಿಕೆಯಾಗಿದ್ದು, 3,458 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
130 ಜನರು ಸಾವನಪ್ಪಿದ್ದು, 634 ಜನರಿಗೆ ಚಿಕಿತ್ಸೆ ನೀಡಲಾಗ್ತಿದೆ ಎಂದು ಕೊರೊನಾ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.