ಬೀದರ್ : ಕೊರೊನಾಗೆ ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. 39 ನೂತನ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯ ಔರಾದ್ನಲ್ಲಿ 3, ಬಸವಕಲ್ಯಾಣ 6, ಭಾಲ್ಕಿ 3, ಬೀದರ್ 20 ಹಾಗೂ ಹುಮನಾಬಾದ್ನ 7 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈವರೆಗೂ 72 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 1935ಕ್ಕೆ ಏರಿಕೆಯಾಗಿದೆ. ಇಂದು 49 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 1365 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.