ಬೀದರ್: ಜಿಲ್ಲೆಯಲ್ಲಿಂದು ಹೊಸದಾಗಿ 50 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 2,448ಕ್ಕೆ ಏರಿಕೆಯಾಗಿದ್ದು, ಈವರೆಗೆ 82 ಜನರು ಸಾವನಪ್ಪಿದ್ದಾರೆ. 1,670 ಜನರು ಗುಣಮುಖರಾಗಿ ಮನೆಗೆ ತೆರಳಿದ್ದರೆ, 692 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು, ಬೀದರ್, ಔರಾದ್, ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ್ ತಾಲೂಕುಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ.