ಬಸವಕಲ್ಯಾಣ(ಬೀದರ್): ತಾಲೂಕಿನ ಗುಂಡೂರ ಗ್ರಾಮದಲ್ಲಿ ಕೊರೊನಾ ಶಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 45 ವರ್ಷದ ಈ ವ್ಯಕ್ತಿ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಕೋವಿಡ್-19 ವಿಧಿ, ವಿಧಾನಗಳ ಪ್ರಕಾರ ಸಾವನ್ನಪ್ಪಿದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ವೈದ್ಯರ ಸಮ್ಮುಖದಲ್ಲಿ ಗ್ರಾಮದಲ್ಲೇ ನೆರವೇರಿಸಲಾಗಿದೆ.
![Corona suspected dead in Basavakalyana](https://etvbharatimages.akamaized.net/etvbharat/prod-images/7386652_35_7386652_1590685287877.png)
ಹೆಚ್‌ಐವಿ ಸೋಂಕಿಗೆ ಒಳಗಾಗಿದ್ದ ಈ ವ್ಯಕ್ತಿ ಮಹಾರಾಷ್ಟ್ರದ ಮುಂಬೈನಲ್ಲಿ ಚಾಲಕ ವೃತ್ತಿಯಲಿದ್ದ. ಕಳೆದ 13 ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ ವ್ಯಕ್ತಿಯನ್ನು ಆತನ ಜಮೀನಿನಲ್ಲಿ ಕುಟುಂಬದಿಂದ ಪ್ರತ್ಯೇಕವಾಗಿ ಇಡಲಾಗಿತ್ತು. ಆದರೆ ಕಳೆದ 3 ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾದ ಕಾರಣ ಈತನನ್ನು ಬೀದರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಹೆಚ್‌ಐವಿಯೊಂದಿಗೆ ಕೊರೊನಾ ಶಂಕೆ ಹಿನ್ನೆಲೆ ಈತನ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಈತ ಮೃತಪಟ್ಟಿದ್ದಾನೆ ಎನ್ನಲಾಗಿದೆ.