ETV Bharat / state

ಬೀದರ್​ನಲ್ಲಿ 63 ಜನರಲ್ಲಿ ಕೊರೊನಾ ದೃಢ : ಮತ್ತೊಂದು ಬಲಿ.!

ಬೀದರ್ ಜಿಲ್ಲೆಯಲ್ಲಿಂದು 63 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, 40 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

bidar
ಬೀದರ್​
author img

By

Published : Jul 11, 2020, 8:56 PM IST

ಬೀದರ್: ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಜಿಲ್ಲೆಯಲ್ಲಿಂದು 63 ಜನರಲ್ಲಿ ಕೋವಿಡ್​ ದೃಢಪಟ್ಟಿದ್ದು ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ನಗರದ 40 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 53 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 63 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಹುಮನಾಬಾದ್-39, ಭಾಲ್ಕಿ-08, ಔರಾದ್-04, ಕಮಲನಗರ- 07, ಬಸವಕಲ್ಯಾಣ-04, ಬೀದರ್-02 ಜನರಲ್ಲಿ ಸೋಂಕು ಪತ್ತೆಯಾಗಿದೆ.

bidar
63 ಜನರಲ್ಲಿ ಕೊರೊನಾ ದೃಢ

ಇನ್ನು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 53 ಆಗಿದೆ. 592 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. 332 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.