ಬೀದರ್: ಕೊವಿಡ್ -19 ಸೊಂಕಿತರಿಗೆ ಚಿಕಿತ್ಸೆ ನೀಡಲು ವಿಶೇಷ ವಾರ್ಡ್ ಸ್ಥಾಪನೆ ಮಾಡಲು ಮೊರಾರ್ಜಿ ದೇಶಾಯಿ ವಸತಿ ಶಾಲೆಯ ಕಟ್ಟಡದಲ್ಲಿ ಸ್ಥಳ ನಿಗದಿಪಡಿಸಲಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸ್ಥಳ ಪರಿಶಿಲನೆ ನಡೆಸಿದರು.
ಜಿಲ್ಲೆಯ ಭಾಲ್ಕಿ ತಾಲೂಕಿನ ಕೊನ ಮೇಳಕುಂದಾ ಗ್ರಾಮದ ಹೊರ ವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಗಳಲ್ಲಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪನೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಭಾಲ್ಕಿ ತಾಲೂಕಿನಲ್ಲಿ ಸೊಂಕಿತರು ಇಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಕೊನ ಮೆಳಕುಂದಾ ಗ್ರಾಮದ ಈ ವಸತಿ ಶಾಲೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಒಂದು ಕಾಲಕ್ಕೆ 100 ಜನರಕ್ಕೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಂಡು ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದರು.
ಈ ವೇಳೆ ತಹಸೀಲ್ದಾರ್ ಅಣ್ಣಾರಾವ್ ಪಾಟೀಲ್, ಡಿವೈಎಸ್ಪಿ ಡಾ.ದೇವರಾಜ್ ಬಿ, ತಾಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನೀರಗೂಡೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.