ಬಸವಕಲ್ಯಾಣ: ಕೋವಿಡ್-19 ನಿಯಂತ್ರಣದ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದಕ್ಕಾಗಿ ನಗರದ ಬಸ್ ನಿಲ್ದಾಣ ಸಮಿಪದ ಖಾಸಗಿ ಆಸ್ಪತ್ರೆಯೊಂದರ ನೋಂದಣಿಯನ್ನು ಅಮಾನತುಗೊಳಿಸಲಾಗಿದೆ.
ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಇಲಾಖೆ ಜಾರಿಗೊಳಿಸಿದ ನೀತಿ, ನಿಯಮಗಳ ಅನ್ವಯ ಇಲಾಖೆಗೆ ಕಾಲ ಕಾಲಕ್ಕೆ ಸೂಕ್ತ ಮಾಹಿತಿ ನೀಡಬೇಕು. ಅದರೆ ಇತ್ತೀಚಿಗೆ ಈ ಆಸ್ಪತ್ರೆಯಲ್ಲಿ ದಾಖಲಾಗಿ ಬೇರೆ, ಬೇರೆ ಜಿಲ್ಲೆಗಳ ಆಸ್ಪತ್ರೆಗೆ ತೆರಳಿದ ಮೂವರು ವ್ಯಕ್ತಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಉಸಿರಾಟದ ತೊಂದರೆ, ತೀವ್ರ ಜ್ವರ, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರೂ ಕೂಡ ಮಾಹಿತಿ ನೀಡದ ಕಾರಣ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆಸ್ಪತ್ರೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.