ETV Bharat / state

ಬೀದರ್​ನಲ್ಲಿ ಪೊಲೀಸ್ ಕಾನ್​ಸ್ಟೇಬಲ್​ ಆತ್ಮಹತ್ಯೆ.. - etv bharat kannada

ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ.

crime-a-police-constable-committed-suicide-in-bidar
ಬೀದರ್​ನಲ್ಲಿ ಪೊಲೀಸ್ ಕಾನ್ಸ್​​ಟೇಬಲ್​ ಆತ್ಮಹತ್ಯೆ: ಪ್ರೇಮ ವೈಫಲ್ಯ ಶಂಕೆ
author img

By ETV Bharat Karnataka Team

Published : Sep 2, 2023, 9:29 PM IST

ಬೀದರ್​: ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬಸವಕಲ್ಯಾಣ ಪಟ್ಟಣದ ಲಾಡ್ಜ್ ನಲ್ಲಿ ನಡೆದಿದೆ. ಉಮೇಶ್ ನಾಯ್ಕ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಮೂಲತಃ ವಿಜಯನಗರ ಜಿಲ್ಲೆಯವರಾಗಿದ್ದ ಉಮೇಶ್ 2021ರಲ್ಲಿ ಪೊಲೀಸ್ ಕಾನ್​ಸ್ಟೇಬಲ್​ ಆಯ್ಕೆಯಾಗಿದ್ದರು. ಅವರು ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉಮೇಶ್ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದ ಪೋಷಕರು ಬೀದರ್​ಗೆ ಆಗಮಿಸಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಮೂವರು ಪುಟ್ಟ ಮಕ್ಕಳು, ತಂದೆ ಅನುಮಾನಾಸ್ಪದ ಸಾವು: ಘಟನೆಯ ನಂತರ ತಾಯಿ ಪರಾರಿ ಆರೋಪ

ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ, ಇಬ್ಬರು ಮಕ್ಕಳು ಸಾವು: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ಶನಿವಾರ ನಡೆದಿದೆ. ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಒಂದು ಮಗು ಹಾಗೂ ತಂದೆ ಭೀರಣ್ಣ ಮಸಬಿನಾಳ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿದಿನ ಮನೆಯಲ್ಲಿ ಪತಿ-ಪತ್ನಿಯ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಪತಿ ಭೀರಣ್ಣ ಶನಿವಾರ ಪತ್ನಿ ಮನೆಯಲ್ಲಿ ಇರದ ಕಾರಣ ಮಕ್ಕಳಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಟ್ಟು ತಾನು ವಿಷ ಸೇವಿಸಿದ್ದಾನೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಆಗಮಿಸಿ ತಕ್ಷಣ ಮನಗೂಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.