ETV Bharat / state

Bidar crime: ಪುಟ್ಟ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪ್ರಕರಣ ದಾಖಲು - ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ

Father Raped Daughter: ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೀದರ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

Constant rape of minor daughter by father
ತಂದೆಯಿಂದಲೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ
author img

By

Published : Jul 31, 2023, 12:55 PM IST

Updated : Jul 31, 2023, 8:28 PM IST

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ತನ್ನ 12 ವರ್ಷದ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು, ಕೇಳಲು ಬಂದ ಪತ್ನಿಯ ಮೇಲೆಯೇ ಥಳಿಸಿ ಗಲಾಟೆ ಮಾಡುತ್ತಿದ್ದನಂತೆ. ಘಟನೆಯ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಆಪ್ತ ಸಮಾಲೋಚನೆಯಲ್ಲಿ ಬಾಲಕಿ ಸಂಗತಿಯನ್ನು ತೆರೆದಿಟ್ಟಿದ್ದಾಳೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಭಿಕ್ಷೆ ಬೇಡುತ್ತಿದ್ದ ಬಾಲಕಿ ಮೇಲೆ ದೇವಾಲಯದ ಆಡಳಿತ ಸಿಬ್ಬಂದಿಯೇ ದೇವಾಲಯದ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿತ್ತು. ಮೈಹಾರ್​ ದೇವಾಲಯದ ಆಡಳಿತ ಸಮಿತಿಯ ಇಬ್ಬರು ನೌಕರರು ಬಾಲಕಿಗೆ ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಅತ್ಯಾಚಾರ ನಡೆಸಿದ್ದರು. ಗುರುವಾರ ಅತ್ಯಾಚಾರ ನಡೆದಿದ್ದು, ಮರುದಿನ ಬೆಳಕಿಗೆ ಬಂದಿದೆ. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ರೇವಾದಲ್ಲಿರುವ ಸಂಜಯ್​ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಪಿಗಳನ್ನು ರವಿ ಚೌಧರಿ ಹಾಗೂ ಅತುಲ್​ ಬಧೋಲಿಯಾ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರದ ಬೆಳವಣಿಗೆಯಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್​ ಇಲಾಖೆ ಸಿಬ್ಬಂದಿ ಸೇರಿ ಅತ್ಯಾಚಾರ ಆರೋಪಿಗಳಿಬ್ಬರ ಮನೆಗಳನ್ನು ಬುಲ್ಡೋಜರ್​ನಿಂದ ಕೆಡವಿದ್ದರು.

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ: 8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು, ಬಾಲಕಿ ಗರ್ಭಿಣಿಯಾಗಿರುವ ಘಟನೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿತ್ತು. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಸಿಕ್ಕಿ ಮಾತನಾಡುತ್ತಿದ್ದಾತ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಬಂದು, ಬಾಲಕಿಯ ಬಾಯಿಗೆ ಕೈ ಹಿಡಿದು, ಪಕ್ಕದ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದನು. ಅದಷ್ಟೇ ಅಲ್ಲದೆ ಬೇರೆ ಸಮಯದಲ್ಲೂ ಬಾಲಕಿ ಒಬ್ಬಳೇ ಇದ್ದಾಗ ಬಂದು ಅತ್ಯಾಚಾರ ನಡೆಸಿದ್ದನು. ಇದರಿಂದ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತನ್ನ ತಾಯಿ ಜೊತೆ ಬಂದು ಮಂಗಳೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಇದನ್ನೂ ಓದಿ: ಕೋಚಿಂಗ್ ಕ್ಲಾಸ್‌ಗೆ ತೆರಳುತ್ತಿದ್ದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ; ರಾಜಸ್ಥಾನದಲ್ಲಿ ಸಂಚಲನ

Last Updated : Jul 31, 2023, 8:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.