ETV Bharat / state

ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ - ಎ.ಜೆ ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮನ್ವಯ ಸಮಿತಿ

ಒಳ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದಿಂದ ಮಂಡಿಸಲಾದ ವರದಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಲಾಯಿತು.

basavakalyana
ಯಾತ್ರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ
author img

By

Published : Oct 5, 2020, 10:17 PM IST

ಬಸವಕಲ್ಯಾಣ: ಒಳ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದಿಂದ ಮಂಡಿಸಲಾದ ವರದಿಯನ್ನು ತಕ್ಷಣ ಜಾರಿಗೆ ತರಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಆಳುವ ಪಕ್ಷದ ವಿರುದ್ಧ ಹೋರಾಟ ತೀವ್ರಗೊಳಿಸಿ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎ.ಜೆ ಸದಾಶಿವ ಆಯೋಗದ ವರದಿ ಜಾರಿ ಹೋರಾಟ ಸಮನ್ವಯ ಸಮಿತಿ ಎಚ್ಚರಿಸಿತು.

ನಗರದ ಯಾತ್ರಿ ನಿವಾಸದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಪ್ರಮುಖರು, ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕಾಗಿ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿದರೂ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳು ಇದುವರೆಗೆ ನಮ್ಮ ಮನವಿಗೆ ಸ್ಪಂದಿಸಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳುವ ಮೂಲಕ ವರದಿ ಜಾರಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಯಾತ್ರಿ ನಿವಾಸದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದಿಂದ ಮಂಡಿಸಲಾದ ವರದಿ ಜಾರಿಗೆ ಒತ್ತಾಯಿಸಲಾಯಿತು.

ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಮುತ್ತಣ್ಣ ವೈ.ಬೆಣ್ಣೂರ ಮಾತನಾಡಿ, ದಲಿತರಿಗೆ ಜನ ಸಂಖ್ಯೆಗೆ ಅನುಗುಣವಾಗಿ ನ್ಯಾಯ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಲ್ಲಿ ಯಾವುದೇ ಪಕ್ಷಗಳು ಆಸಕ್ತಿ ತೋರಿಸಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ಸಮಾಜದ ಬೇಡಿಕೆಗೆ ಸ್ಪಂದಿಸಲಾಗುವುದು ಎಂಬ ಭರವಸೆ ನೀಡುತ್ತಾರೆ. ಆದರೆ, ಚುನಾವಣೆಗಳು ಮುಗಿದ ಮೇಲೆ ವರದಿ ಜಾರಿಗೆ ಮುಂದಾಗುತ್ತಿಲ್ಲ. ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತರಲಾಗುತ್ತಿದೆ ಎನ್ನುವ ಆಶಾಭಾವನೆ ಹೊಂದಲಾಗಿದೆ. ಬಿಜೆಪಿ ಸರ್ಕಾರ ವರದಿ ಜಾರಿಗೆ ತಂದರೆ ನಮ್ಮ ಸಮಾಜ ಎಂದೆಂದಿಗೂ ಬಿಜೆಪಿಯ ಜೊತೆಗಿರುತ್ತದೆ ಎಂದರು.

ಮಾದಿಗ ದಂಡೋರಾ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ ಮಾತನಾಡಿ, ಈಗ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ನಮ್ಮ ಸಮಾಜದಿಂದ ಸರ್ಕಾರದ ವಿರುದ್ಧ ನಿರ್ಣಯ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಡಿಸೆಂಬರ್​ 11ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ ಕುರಿತಾಗಿ ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ಪ್ರಮುಖರ ಸಭೆ ಕರೆದು ರೂಪು-ರೇಷೆಗಳ ಕುರಿತು ಚರ್ಚಿಸಲಾಗುವುದು ಎಂದು ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಮನ್ವಯ ಸಮಿತಿಯ ರಾಜ್ಯ ಉಪಾಧ್ಯಕ್ಷರುಗಳಾದ ಅಶೋಕ ಕಟ್ಟಿ ಹಾಗೂ ರಾಮಚಂದ್ರ ಕಾಂಬಳೆ, ಮಾದಿಗ ದಂಡೋರಾ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಸಂಜುಕುಮಾರ ಸಂಗನೂರೆ ಮತ್ತು ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.