ಬೀದರ್ : ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಡಾ. ಹೆಚ್.ಆರ್. ಮಹದೇವ್ ಅವರನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಸುತ್ತೋಲೆ ಹೊರಡಿಸಿದ್ದು, ಸದ್ಯ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರ ಹೆಚ್ಚುವರಿ ಜವಾಬ್ದಾರಿಯಲ್ಲಿರುವ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಡಾ. ಹೆಚ್.ಆರ್ ಮಹದೇವ್ ಅವರನ್ನು ನಿಯೋಜನೆಗೊಳಿಸಲಾಗಿದೆ.
ಸರ್ಕಾರದ ಈ ಆದೇಶದಿಂದ ಈ ಹಿಂದೆ ಸುದೀರ್ಘಕಾಲ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ಮಹದೇವ್ ಅವರ ಸೇವಾವಧಿಯನ್ನು ಅನುಭವಿಸಿರುವ ಜಿಲ್ಲೆಯ ಜನರಲ್ಲಿ ಹರ್ಷ ವ್ಯಕ್ತವಾಗಿದೆ. ಬಸವಕಲ್ಯಾಣ ಅಭಿವೃದ್ಧಿಗೆ ಹೊಸ ಪರ್ವ ಆರಂಭವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.