ಬಸವಕಲ್ಯಾಣ: ಸಾಲಬಾಧೆಯಿಂದ ನೊಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುಡಬಿವಾಡಿ ಗ್ರಾಮದಲ್ಲಿ ನಡೆದಿದೆ.
ನಾಗಪ್ಪ ರೇವಪ್ಪ ಯಾರಾ (47) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ತಾಲೂಕಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಹಾಗೂ ಪಿಕೆಪಿಎಸ್ ಸೇರಿ 2.35 ಲಕ್ಷ ಸಾಲ ಮಾಡಿಕೊಂಡಿದ್ದನು.
ಸಾಲದಿಂದ ನೊಂದಿದ್ದ ರೈತ ರೇವಪ್ಪ, ಹೊಲಕ್ಕೆ ಹಾಕುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಈತನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ರೈತ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಈ ಸಂಬಂಧ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.