ಬೀದರ್: ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಟ್ಯಾಕ್ಸ್ ಭಯೋತ್ಪಾದನೆ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತಕ್ಕೆ ಬಂದಿದ್ದೇ ಬೆಲೆ ಏರಿಕೆ ವಿರೋಧಿಸಿ. ಪೆಟ್ರೋಲ್, ಡೀಸೆಲ್ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುಪಿಎ ವಿರುದ್ಧ ಪ್ರತಿಭಟಿಸಿ ಜನರಿಗೆ ಬೆಲೆ ಏರಿಕೆ ನಿಯಂತ್ರಣ ಮಾಡುವ ಕನಸು ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದರು.
ಅಧಿಕಾರಕ್ಕೆ ಬಂದ ಮೇಲೆ ತೈಲ ಬೆಲೆ, ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೊರೊನಾ ಸಂದರ್ಭದಲ್ಲಿ ಜನಸಾಮಾನ್ಯರ ಮೇಲೆ ಹೊರೆ ಹಾಕಿಸಿ ಕಾರ್ಖಾನೆಗಳ ಉದ್ಧಾರ ಮಾಡಿದ ಸರ್ಕಾರ ಜನ ಪರ ಇದೆಯಾ? ಎಂದು ಖಾದರ್ ಪ್ರಶ್ನಿಸಿದ್ದಾರೆ.