ಬೀದರ್: ರಸ್ತೆ ಪಕ್ಕದಲ್ಲಿ ಸಂಚರಿಸುತ್ತಿದ್ದ ಒಂಟಿ ಮಹಿಳೆಯರ ಕೊರಳಲ್ಲಿನ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಹುದಿನಗಳಿಂದ ತಲೆ ಮರೆಸಿಕೊಂಡಿದ್ದ ನವಾಬ್ ಇರಾನಿ ಎಂಬಾತನನ್ನ ಬಂಧಿಸಲಾಗಿದೆ. ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ರಮೇಶಕುಮಾರ್ ಮೈಲೂರಕರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿತನಿಂದ 15 ಗ್ರಾಂ. ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಡಾ.ದೇವರಾಜ್ ಅವರ ಮಾರ್ಗದರ್ಶನದಲ್ಲಿ ಸಿಪಿಐಗಳಾದ ಶ್ರೀಕಾಂತ, ರಾಜಣ್ಣ ಹಾಗೂ ಪಿಎಸ್ಐ ಕೃಷ್ಣಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.