ಬೀದರ್: ಡಾವರಗವ್ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬಾಲ್ಕಿ ತಾಲೂಕಿನ ಡಾವರಗವ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನೀಲ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದವರು.
ಮೂಲತ ಹುಮನಾಬಾದ್ ತಾಲೂಕಿನ ಮುಗನೂರು ಗ್ರಾಮದ ಸುನೀಲ್ ಡಾವರಗಾಂವ್ ಗ್ರಾ.ಪಂ.ಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದು, ಪಿಡಿಒ ಹಾಗೂ ಅಧ್ಯಕ್ಷರು ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ ದುಬಲಗುಂಡಿ ಹೊರವಲಯದ ಮರಕ್ಕೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಇದನ್ನು ಗಮನಿಸಿದ ರೈತರು ಸುನೀಲ್ನನ್ನ ರಕ್ಷಿಸಿ ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗ್ರಾ.ಪಂ. ಅಧ್ಯಕ್ಷ ದೇವೇಂದ್ರ ಹಾಗೂ ಪಿಡಿಒ ಮಲ್ಲೇಶ್ ಸುನೀಲ್ಗೆ ವಿನಾಕಾರಣ ಕಿರಕುಳ ನೀಡುತ್ತಿದ್ದಾರೆ. ಈ ಕುರಿತು ಹಲವಾರು ಬಾರಿ ಪಂಚಾಯಿತಿ ಸದಸ್ಯರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ತೀವ್ರವಾಗಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎಂದು ಸುನೀಲ್ ಸಂಬಂಧಿ ಆರೋಪಿಸಿದ್ದಾರೆ.
ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.