ಬಸವಕಲ್ಯಾಣ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರ 57ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಲಾಯಿತು.
ನಗರದ ಬಿಕೆಡಿಬಿ ಸಭಾ ಭವನದಲ್ಲಿ ಮಠದ ಭಕ್ತರು ಶ್ರೀಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಆಯೋಜಿಸಿದ್ದರು. ಸ್ಥಳೀಯ ಶಾಸಕ ಬಿ.ನಾರಾಯಣರಾವ್ ಅವರು ಹಾರಕೂಡ ಶ್ರೀಗಳಿಗೆ 57 ತೊಲದ ಚಿನ್ನದ ಕಿರೀಟವನ್ನ ಉಡುಗೊರೆಯಾಗಿ ಅರ್ಪಿಸುವ ಮೂಲಕ ಗೌರವಿಸಿದರು.
ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೀದರ್, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀಗಳಿಗೆ ಸನ್ಮಾನಿಸಿ, ಆಶೀರ್ವಾದ ಪಡೆದರು.
ಜಿಡಗಾ ಮುಕ್ತಿ ಮಂದಿರದ ಶ್ರೀ ಮುರುಗರಾಜೇಂದ್ರ ಮಹಾಸ್ವಾಮೀಜಿ, ಬಬಲಾದನ ಶ್ರೀ ಗುರುಪಾದಲಿಂಗ ಮಹಾಸ್ವಾಮೀಜಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಕಲಬುರಗಿ ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ, ಜಿಪಂ ಸದಸ್ಯ ಸುಧೀರ ಕಾಡಾದಿ, ಪ್ರದೀಪ ವಾತಡೆ, ಜಗನ್ನಾಥ ಪಾಟೀಲ ಮಂಠಾಳ, ಬಾಬು ಹೊನ್ನಾನಾಯಕ ಸೇರಿದಂತೆ ಪೂಜ್ಯರು, ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.