ಬೀದರ್: ಕೊವೀಡ್-19 ಸೋಂಕಿತನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನ ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಬೀದರ್ನ ಬಿದ್ರಿ ಕಾಲೋನಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕನನ್ನ ಅಮಾನತುಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿ.ಜಿ.ರೆಡ್ಡಿ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಿರಿಯ ಆರೋಗ್ಯ ಸಹಾಯಕ ರಾಜಶೇಖರ ಅವರನ್ನ ಕೊವೀಡ್-19 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನ ಪತ್ತೆ ಹಚ್ಚುವ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ ಇವರು ಮನೆಗೆ ಭೇಟಿ ನೀಡಿ ವಿವರ ಪಡೆಯದೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಹಿಳೆಯ ಜೊತೆ ಮೊಬೈಲ್ನಲ್ಲಿ ಮಾತನಾಡಿ, ದ್ವಿತೀಯ ಸಂಪರ್ಕಿತರ ಯಾವುದಾದರೂ ಹೆಸರುಗಳನ್ನ ಕೊಡುವಂತೆ ಕೇಳಿದ್ದಾರೆ. ಇವರ ನಡೆ ಸರ್ಕಾರಿ ನೌಕರರ ನಡುವಳಿಕೆಗೆ ವಿರುದ್ಧವಾಗಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1958ರ ನಿಯಮ 98ರ ಅನ್ವಯ ಜೀವನಾಂಶ ಭತ್ಯೆ ಪಡೆಯಲು ಇವರು ಅರ್ಹರಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.