ETV Bharat / state

ಅನ್ಯ ರಾಜ್ಯದಿಂದ ಬರುವವರ ತಪಾಸಣೆ ಕಡ್ಡಾಯ: ರಮಣರೆಡ್ಡಿ - ಚೆಕ್ ಪೋಸ್ಟ್​

ಅನ್ಯ ರಾಜ್ಯಗಳಿಂದ ಆಗಮಿಸುವ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ಅವರನ್ನು ಕ್ವಾರಂಟೈನ್‌ಗೆ ಕಳುಹಿ ಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

check post
check post
author img

By

Published : May 11, 2020, 11:25 AM IST

ಬಸವಕಲ್ಯಾಣ (ಬೀದರ್): ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುವ ಜೊತೆಗೆ ಕಡ್ಡಾಯವಾಗಿ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣರೆಡ್ಡಿ ಸೂಚಿಸಿದರು.

ಚೆಕ್ ಪೋಸ್ಟ್ ಬಳಿ ಪರಿಶೀಲನೆ

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಲೂಕಿನ ಚಂಡಕಾಪೂರ ಸಮೀಪದ ರಾಜ್ಯದ ಗಡಿಯಲ್ಲಿಯಲ್ಲಿ ಸ್ಥಾಪಿಸಿದ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣರಡ್ಡಿ, ಸರ್ಕಾರದ ಮಾರ್ಗಸೂಚಿಯಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಅನ್ಯ ರಾಜ್ಯಗಳಿಂದ ಆಗಮಿಸುವ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ಅವರನ್ನು ಕ್ವಾರಂಟೈನ್‌ಗೆ ಕಳುಹಿಸಬೇಕು ಎಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಎಚ್ಆ.ರ್.ಮಹಾದೇವ ಮಾತನಾಡಿ, ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯಗಳಿಂದ ಬರುವ ಜನರಿಗೆ ಊಟ, ನೀರು ಹಾಗೂ ಸಾರಿಗೆ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಬೇಕು. ಜಿಲ್ಲೆ ಸೇರಿದಂತೆ ಅನ್ಯ ಜಿಲ್ಲೆಗಳಿಗೆ ತೆರಳುವ ಜನರಿಗೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಗ್ಯಾನೇಂದ್ರ ಕುಮಾರ ಗಂಗವಾರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕಕೊಡ್, ಸಹಾಯಕ ಆಯುಕ್ತ ಭಂವರಸಿಂಗ್ ಮೀನಾ, ತಹಶೀಲ್ದಾರ್​ ಸಾವಿತ್ರಿ ಸಲಗರ್, ಟಿಎಚ್‌ಒ ಡಾ.ಶರಣಪ್ಪ ಮುಡಬಿ, ಸಿಪಿಐ ಮಹೇಶಗೌಡ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.