ಬೀದರ್: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹಲವು ಭಾಗದಲ್ಲಿ ಆಸ್ತಿ-ಪಾಸ್ತಿಗಳಿಗೆ ಹಾನಿಯಾದ ವರದಿಯಾಗಿದೆ.
ಸಂಜೆ ಹೊತ್ತಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬಿಸಿಲಿನಿಂದ ಬೆಂದು ಹೋಗಿದ್ದ ಜನರಿಗೆ ತಂಪೆರೆದರೆ, ಹಲವು ಕಡೆಗಳಲ್ಲಿ ಮನೆ ಮೇಲ್ಛಾವಣಿಗಳು ಗಾಳಿಗೆ ಹಾರಿ ಹೋಗಿವೆ.
ಜಿಲ್ಲೆಯ ಕಮಲನಗರ, ಔರಾದ್, ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆಯಾಗಿದೆ. ಬೇಸಿಗೆಯಲ್ಲೇ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.