ETV Bharat / state

ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸಿಬ್ಬಂದಿ ಮುಷ್ಕರ ಹಿಂಪಡೆಯಲಿ: ಬೊಮ್ಮಾಯಿ ಮನವಿ - ಬಸವರಾಜ ಬೊಮ್ಮಾಯಿ

ಸಾರಿಗೆ ಇಲಾಖೆ ನೌಕರರು 6ನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಮುಷ್ಕರ ನಡೆಸುವುದು ಸೂಕ್ತವಲ್ಲ, ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಮನವಿ ಮಾಡಿದ್ದಾರೆ.

Basavaraja Bommai
ಬಸವರಾಜ ಬೊಮ್ಮಾಯಿ
author img

By

Published : Apr 7, 2021, 3:49 PM IST

Updated : Apr 7, 2021, 4:00 PM IST

ಬೀದರ್: ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮಾನವೀಯತೆ ಆಧಾರದ ಮೇಲೆ ಮುಷ್ಕರವನ್ನು ಹಿಂಪಡೆಯುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ನಮ್ಮವರು, ನಮ್ಮ ಸಹೋದರರಿದ್ದಂತೆ. ಅವರಿಗೆ ಈ ಹಿಂದೆಯೂ ತಿಳುವಳಿಕೆಯನ್ನು ಮಾಡಿಕೊಟ್ಟಿದ್ದೇವೆ. ಈಗಲೂ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸಾರಿಗೆ ನೌಕರರಿಗೆ ಮುಷ್ಕರ ಹಿಂಪಡೆಯುವಂತೆ ಗೃಹ ಸಚಿವ ಬೊಮ್ಮಾಯಿ ಮನವಿ

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾರಿಗೆ ನೌಕರರ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಬಳ ಕಡಿತ ಮಾಡಿಲ್ಲ. ಬೇರೆ ರಾಜ್ಯಗಳಲ್ಲಿ ಸರ್ಕಾರಿ ನೌಕರರ ಸಂಬಳವನ್ನು ಕಡಿತಗೊಳಿಸಲಾಗಿದೆ. ಸಾರಿಗೆ ನೌಕರರ ಸಂಬಳ ಹೆಚ್ಚು ಮಾಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದಕ್ಕೆ ಸ್ವಲ್ಪ ಸಮಯ ಕೊಡಿ ಎಂದು ಅವರು ಮುಷ್ಕರನಿರತ ಸಾರಿಗೆ ಸಿಬ್ಬಂದಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ಸಾರಿಗೆ ನೌಕರರು ಹಾಗೂ ಸಾರಿಗೆ ನೌಕರರ ಸಂಘಟನೆಗಳ ಮುಖಂಡರೊಂದಿಗೆ ಮಾತನಾಡುತ್ತಾರೆ. ವೇತನ ಹೆಚ್ಚಳ ಕುರಿತು ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವರು ಹೇಳಿದ್ರು.

ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಜನ ಸಂಚಾರ ಮಾಡುತ್ತಾರೆ. ವ್ಯಾಪಾರಕ್ಕೆ, ಕಾಲೇಜಿಗೆ, ಆಸ್ಪತ್ರೆಗೆ, ನೌಕರಿಗಾಗಿ ಹೋಗುವ ಜನರು ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಈಗ ಅವರಿಗೆ ತೊಂದರೆಯಾಗಿದೆ. ಈ ಮುಷ್ಕರವನ್ನು ಮಾನವೀಯತೆಯ ಆಧಾರದ ಮೇಲೆ ಹಿಂಪಡೆದು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಸಾರಿಗೆ ನೌಕರರು ಹಾಗೂ ಯೂನಿಯನ್ ಮುಖಂಡರಿಗೆ ಬಸವರಾಜ ಬೊಮ್ಮಾಯಿ ಕೋರಿದರು.

ಇದನ್ನೂ ಓದಿ: ಸಾರಿಗೆ ಮುಷ್ಕರದ ಬಗ್ಗೆ ಗೊತ್ತಿರಲಿಲ್ಲ, ಆಟೋದವರು ಜಾಸ್ತಿ ಹಣ ಕೇಳ್ತಿದ್ದಾರೆ: ಮೆಜೆಸ್ಟಿಕ್​ನಲ್ಲಿ ಪ್ರಯಾಣಿಕರ ಆಳಲು

Last Updated : Apr 7, 2021, 4:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.