ಬೀದರ್: ಮಧ್ಯರಾತ್ರಿ ಮನೆಯೊಂದಕ್ಕೆ ನುಗ್ಗಿದ ನಾಲ್ವರು ಆಗಂತುಕರ ತಂಡ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾದ ಘಟನೆ ನಡೆದಿದೆ.
ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ತಡರಾತ್ರಿ ದೇವಿದಾಸ ಪುಂಡಲಿಕರಾವ್ ಎಸಬಾ ಎಂಬುವರ ಮನೆಗೆ ನುಗ್ಗಿದ ನಾಲ್ವರು, 22 ತೊಲ ಚಿನ್ನ, ನಗದು ಸೇರಿದಂತೆ ಒಟ್ಟು 7 ಲಕ್ಷ ಮೌಲ್ಯದ ಬೆಲೆ ಬಾಳುವ ವಸ್ತುಗಳು ಕದ್ದು ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಔರಾದ್ ಪೊಲೀಸ್ ಠಾಣೆಯ ಪಿಎಸ್ಐ ನಾನಾಗೌಡ ಪಾಟೀಲ್ ಸ್ಥಳ ಪರಿಶೀಲನೆ ನಡೆಸಿದ್ದು, ಶ್ವಾನ ದಳದಿಂದ ಆರೋಪಿಗಳ ಗುರುತಿಗಾಗಿ ಶೋಧ ನಡೆಸಿದರು. ವಿಷಯ ತಿಳಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ರೆಡ್ಡಿ, ಡಿವೈಎಸ್ಪಿ ವೆಂಕನಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.