ಬಸವಕಲ್ಯಾಣ (ಬೀದರ್): ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ವೈದ್ಯರು, ಸಿಬ್ಬಂದಿ ಸೇರಿ ಭರ್ಜರಿ ನೃತ್ಯ ಮಾಡಿದ್ದಾರೆ.
ಸೋಂಕಿತರ ಕೈ ಕೈ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ನಗರದ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ವಕಾರ್ ಯೂನಿಸ್ ನೇತೃತ್ವದ ತಂಡ ನಿನ್ನೆ ರಾತ್ರಿ ಕೊರೊನಾ ವಾರ್ಡ್ನಲ್ಲಿ ಸೋಂಕಿತರ ಕೈ ಹಿಡಿದು ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆಗಿಂತಲೂ ಹೆಚ್ಚು ಅವರ ಆತ್ಮಸ್ಥೈರ್ಯ ಇಮ್ಮಡಿಗೊಳಿಸುವುದು ಅತೀ ಮಹತ್ವದ್ದಾಗಿದೆ. ಇಂತಹ ಕಾರ್ಯವನ್ನು ಇಲ್ಲಿಯ ವೈದ್ಯರು ಮತ್ತು ಸಿಬ್ಬಂದಿ ತಂಡ ಮಾಡುತ್ತಿರುವುದು ಪ್ರಶಂಸೆ ಕೇಳಿಬಂದಿದೆ.