ಬಸವಕಲ್ಯಾಣ: ಕೊರೊನಾ ಸೋಂಕು ನಿಯಂತ್ರಿಸಲು ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಧನ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಹಾರಕೂಡ ಶ್ರೀ ಡಾ. ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಹಾರಕೂಡ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್, ಕಾಸ್ಕರ್ಡ್ ಬ್ಯಾಂಕ್ ಮತ್ತು ಪಿಕೆಪಿಎಸ್ ಸಹಯೋಗದಿಂದ ಆಯೋಜಿಸಲಾದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯಸ್ವಾಮಿ ಮಾತನಾಡಿದರು.