ಬೀದರ್: 73ನೇ ಸ್ವಾತಂತ್ರ್ಯ ದಿನದ ನಿಮಿತ್ತ ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹಾದೇವ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.
ನಗರದ ಪೊಲೀಸ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಸ್ವತಂತ್ರ ದಿನದ ಸಮಾರಂಭದಲ್ಲಿ ವಿವಿಧ ಶಾಲಾ ಮಕ್ಕಳು, ಪೊಲೀಸ್ ತುಕಡಿಗಳ ಕವಾಯತು ಎಲ್ಲರ ಗಮನ ಸೆಳೆಯಿತು.
ಸಂಸದ ಭಗವಂತ ಖೂಬಾ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ರಹಿಂಖಾನ್, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪೂರೆ, ಜಿ.ಪಂ ಸಿಇಒ ಮಹಾಂತೇಶ ಬಿಳಗಿ ಹಾಗೂ ಎಸ್.ಪಿ ಟಿ.ಶ್ರೀಧರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.