ಬೀದರ್/ಬೆಂಗಳೂರು: 2023ರ ಜನವರಿ 7, 8 ಹಾಗೂ 9 ರಂದು ಮೂರು ದಿನಗಳ ಕಾಲ ನಡೆಯಲಿರುವ ಬೀದರ್ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಆಹ್ವಾನ ನೀಡಲಾಯಿತು.
ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳಿಗೆ ಆಹ್ವಾನಿಸಿದ್ದು, ಜ. 9 ರಂದು ನಡೆಯುವ ಬೀದರ್ ಉತ್ಸವದ ಸಮಾರೋಪ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ರಹೀಂ ಖಾನ್, ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೋದ್ದಿನ್ ಕಚೇರಿವಾಲೆ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ. ಕೆ. ಸಿದ್ರಾಮ್ ಹಾಗೂ ಇತರರು ನಿಯೋಗದಲ್ಲಿ ಇದ್ದರು.
ಓದಿ: ಬೀದರ್ ಇತಿಹಾಸ ನಮ್ಮ ಯುವ ಪೀಳಿಗೆಗೆ ತಿಳಿಯುವಂತಾಗಬೇಕು: ಭಗವಂತ ಖೂಬಾ