ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ತೀವ್ರ ಪೈಪೋಟಿಯ ನಡುವೆ ಮಂಗಳಾ ಅಂಗಡಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಯ ಹಂತದವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಉಂಟಾಗಿದ್ದು, ಕೊನೆಗೂ ಮಂಗಳಾ ಗೆಲುವು ಮುಡಿಗೇರಿಸಿಕೊಂಡಿದ್ದಾರೆ. ಇದೀಗ ಚುನಾವಣೆ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬೆಳಗಾವಿ ಕ್ಷೇತ್ರದ ಮೊದಲ ಮಹಿಳಾ ಸಂಸದೆಯಾದ ಮಂಗಳಾ ಅಂಗಡಿ ಆಯ್ಕೆಯಾಗಿದ್ದಾರೆ.
LIVE UPDATES: ಬೆಳಗಾವಿ ಲೋಕಸಭೆ ಉಪಸಮರ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ ರೋಚಕ ಗೆಲುವು - ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯುವ ವಿಚಾರಕ್ಕೆ ಗೊಂದಲ
18:00 May 02
ಕೊನೆ ಹಂತದಲ್ಲಿ ಬಿಜೆಪಿಗೆ ಒಲಿದ ವಿಜಯಲಕ್ಷ್ಮೀ.. ಮಂಗಳಾ ಅಂಗಡಿಗೆ ಗೆಲುವು
17:47 May 02
ಕೊನೆಯ ಹಂತದ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ
- ಬೆಳಗಾವಿ ಲೋಕಸಭೆ ಉಪಚುನಾವಣೆಯ 86ನೇ ಸುತ್ತಿನ ಮತ ಎಣಿಕೆ ಪ್ರಗತಿಯಲ್ಲಿ
- ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 4,123 ಮತಗಳ ಮುನ್ನಡೆ
- ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,22,379 ಮತ
- ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 4,26,502 ಮತ
17:37 May 02
85ನೇ ಸುತ್ತಿನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
- ಬೆಳಗಾವಿ ಲೋಕಸಭೆ ಉಪಚುನಾವಣೆಯ 85ನೇ ಸುತ್ತಿನ ಮತ ಎಣಿಕೆ ಮುಕ್ತಾಯ
- ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 3,530 ಮತಗಳ ಮುನ್ನಡೆ
- ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,19,582 ಮತ
- ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 4,23,112 ಮತ
17:26 May 02
84ನೇ ಸುತ್ತಿನ ಬಳಿಕ ಬಿಜೆಪಿ ಭರ್ಜರಿ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ 84ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ 3,103 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 4,19,060 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ 4,22,161 ಮತ ಪಡೆದಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,24,233 ಮತ ಪಡೆದಿದ್ದಾರೆ.
ಅಂತಿಮ ಘಟ್ಟದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
17:21 May 02
82ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ 82ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 293 ಮತಗಳಿಂದ ಅಲ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 4,16,364 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ 4,16,071 ಮತ ಪಡೆದಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,24,233 ಮತ ಪಡೆದಿದ್ದಾರೆ.
17:12 May 02
81ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ 81ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 488 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತತವಾಗಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು ಕಾಂಗ್ರೆಸ್ ಅಭ್ಯರ್ಥಿ 4,16,332 ಮತ ಪಡೆದರೆ, ಬಿಜೆಪಿ 4,15,844 ಮತ ಪಡೆದಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,24,233 ಮತ ಪಡೆದಿದ್ದಾರೆ.
17:02 May 02
79ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಬೆಳಗಾವಿ ಲೋಕಸಭೆ ಉಪಚುನಾವಣೆಯ 79ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 2,049 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತತವಾಗಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು ಕಾಂಗ್ರೆಸ್ ಅಭ್ಯರ್ಥಿ 4,14,995 ಮತ ಪಡೆದರೆ, ಬಿಜೆಪಿ 4,12,946 ಮತ ಪಡೆದಿದ್ದಾರೆ.
16:56 May 02
78ನೇ ಸುತ್ತಿನ ಮತ ಎಣಿಕೆ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಲೋಕಸಭೆ ಉಪಚುನಾವಣೆಯ 78ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 1,628 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತತವಾಗಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು ಕಾಂಗ್ರೆಸ್ ಅಭ್ಯರ್ಥಿ 4,08,894 ಮತ ಪಡೆದರೆ, ಬಿಜೆಪಿ 4,07,266 ಮತ ಹಾಗೂ ಎಂಇಎಸ್ 1,24,233 ಮತ ಪಡೆದಿದ್ದಾರೆ.
16:47 May 02
74ನೇ ಸುತ್ತಿನ ಮತ ಎಣಿಕೆ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಲೋಕಸಭೆ ಉಪಚುನಾವಣೆಯ 74ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 4,944 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತತವಾಗಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಒಟ್ಟು ಕಾಂಗ್ರೆಸ್ ಅಭ್ಯರ್ಥಿ 4,05,814 ಮತ ಪಡೆದರೆ, ಬಿಜೆಪಿ 4,00,870 ಮತ ಹಾಗೂ ಎಂಇಎಸ್ 1,22,694 ಮತ ಪಡೆದಿದ್ದಾರೆ. ಇನ್ನು 67 ಸಾವಿರ ಮತ ಎಣಿಕೆ ಬಾಕಿ ಉಳಿದಿದೆ.
16:40 May 02
ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಪೂರ್ಣ
ಬಿಜೆಪಿ ಶಾಸಕ ಅಭಯ ಪಾಟೀಲ್ ಪ್ರತಿನಿಧಿಸುವ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಗೆ 8,107 ಮತಗಳ ಲೀಡ್ ದೊರೆತಿದೆ. ಬಿಜೆಪಿಗೆ ಒಟ್ಟು 52,999, ಎಂಇಎಸ್ 44,892, ಕಾಂಗ್ರೆಸ್ 30,337 ಮತ ಹಂಚಿಕೆಯಾಗಿದೆ.
16:32 May 02
72ನೇ ಸುತ್ತಿನ ಮತ ಎಣಿಕೆ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಲೋಕಸಭೆ ಉಪಚುನಾವಣೆಯ 72ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 4,060 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತತವಾಗಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
16:16 May 02
70ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 70ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 5,380 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 3,82,735 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 3,77,355 ಮತಗಳಿಸಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,10,936 ಮತಗಳಿಸಿದ್ದಾರೆ.
16:12 May 02
66ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 66ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 3,80,934 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 3,73,125, ಮತಗಳಿಸಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,10,903 ಮತಗಳಿಸಿದ್ದಾರೆ.
16:05 May 02
64ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ಮುಬೆಳಗಾವಿ: ಲೋಕಸಭೆ ಉಪಚುನಾವಣೆಯ 64ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 3,70,968 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 3,62,511 ಮತಗಳಿಸಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 1,08,952 ಮತಗಳಿಸಿದ್ದಾರೆ.
15:58 May 02
ಬಿಜೆಪಿ ಶಾಸಕ ಆನಂದ ಮಾಮನಿ ಕ್ಷೇತ್ರದಲ್ಲಿ ಬಿಜೆಪಿಗೆ ಮುಖಭಂಗ
ಬೆಳಗಾವಿ ಲೋಕಸಭೆ ವ್ಯಾಪ್ತಿಯ ಸವದತ್ತಿ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಶಾಸಕನ ಕ್ಷೇತ್ರದಲ್ಲಿ ಕಾಂಗ್ರೆಸ್ 16,601 ಮತಗಳ ಲೀಡ್ ಪಡೆದಿದೆ. ಕಾಂಗ್ರೆಸ್‌ಗೆ 63,427 ಮತ ಬಂದಿದ್ದರೆ, ಬಿಜೆಪಿ 46,826 ಮತ ಪಡೆದಿದೆ.
15:53 May 02
ಬೆಳಗಾವಿ ಸರ್ವಿಸ್ ವೋಟರ್ ಪೋಸ್ಟಲ್ ಓಟಿಂಗ್ನಲ್ಲಿ ಬಿಜೆಪಿ ಮುನ್ನಡೆ
ಒಟ್ಟು 1,048 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ಗೆ 196 ಮತ, ಬಿಜೆಪಿಗೆ 353 ಮತ, ಎಂಇಎಸ್ 58 ಹಾಗೂ 397 ಮತಗಳು ತಿರಸ್ಕೃತಗೊಂಡಿವೆ.
15:36 May 02
ಬೆಳಗಾವಿಯಲ್ಲಿ ಕೈ ಅಭ್ಯರ್ಥಿ 10 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 60ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 3,28,624 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 3,18,412 ಮತಗಳಿಸಿದ್ದಾರೆ. ಇತ್ತ ಎಂಇಎಸ್ ಅಭ್ಯರ್ಥಿ 94,212 ಮತಗಳಿಸಿದ್ದಾರೆ.
15:22 May 02
ಬೆಳಗಾವಿಯಲ್ಲಿ ಕೈ ಅಭ್ಯರ್ಥಿ 4,841 ಸಾವಿರ ಮತಗಳಿಂದ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 58ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 3,03,153 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 2,98,312 ಮತಗಳಿಸಿದ್ದಾರೆ.
15:02 May 02
ಬೆಳಗಾವಿಯಲ್ಲಿ ಕೈ ಅಭ್ಯರ್ಥಿ 5,362 ಸಾವಿರ ಮತಗಳಿಂದ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 57ನೇ ಸುತ್ತಿನ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 2,97,364 ಮತಗಳಿಸಿದರೆ, ಬಿಜೆಪಿ ಅಭ್ಯರ್ಥಿ 2,92,002 ಮತಗಳಿಸಿದ್ದಾರೆ.
14:41 May 02
ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಭೇರಿ
ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಭೇರಿ
14:35 May 02
ಬೆಳಗಾವಿಯಲ್ಲಿ ಕೈ ಅಭ್ಯರ್ಥಿ 9,212 ಸಾವಿರ ಮತಗಳಿಂದ ಮುನ್ನಡೆ
ಬೆಳಗಾವಿ: ಲೋಕಸಭೆ ಉಪಚುನಾವಣೆಯ 53ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 2,61,669 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ 2,52,457 ಮತ ಪಡೆದಿದ್ದಾರೆ.
14:24 May 02
ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
"ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ನೀಡಿದ ಮತದಾರರಿಗೆ ಧನ್ಯವಾದಗಳು.ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವಂತಹ ಎಲ್ಲ ಅವಕಾಶವಿತ್ತು, ಆದರೇ ಜಾತ್ಯಾತೀತ ಮುಖವಾಡಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ.ಈ ರೀತಿಯ ನಕಲಿ ಜಾತ್ಯಾತೀತರ ಬಗ್ಗೆ ಮುಂದಿನ ದಿನಗಳಲ್ಲಿ ಜನತೆ ಜಾಗೃತರಾಗಬೇಕು." ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
14:15 May 02
ಬೆಳಗಾವಿಯಲ್ಲಿ ಕೈ ಅಭ್ಯರ್ಥಿಗೆ 10 ಸಾವಿರ ಮತಗಳ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 10,105 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 51 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 2,42,079 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 2,52,104 ಮತಗಳನ್ನು ಪಡೆದುಕೊಂಡಿದ್ದಾರೆ.
13:33 May 02
ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು.. ಶರಣು ಸಲಗರಗೆ ಸಿಎಂ ಬಿಎಸ್ವೈ ಅಭಿನಂದನೆ
"ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು." ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
13:29 May 02
ಸಂಸದ ಭಗವಂತ್ ಖೂಬಾ ಕಾಲಿಗೆ ನಮಸ್ಕರಿಸಿದ ಬಿಜೆಪಿ ಅಭ್ಯರ್ಥಿ ಶರಣು ಸಲಗರ
ಬೀದರ್: ಭರ್ಜರಿ ಗೆಲವು ಸಾಧಿಸಿ ಬಳಿಕ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಸಂಸದ ಭಗವಂತ್ ಖೂಬಾ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಇದೇ ವೇಳೆ ಮಾತನಾಡಿದ ಅವರು, ಈ ಗೆಲುವು ಬಸವಕಲ್ಯಾಣ ಮತದಾರರ ಗೆಲುವು. ಈ ಗೆಲುವನ್ನ ಅವರಿಗೆ ಅರ್ಪಿಸುವೆ. ನನ್ನ ಜೀವನದಲ್ಲಿ ಇದು ಐತಿಹಾಸಿಕ ದಿನ. ಬಸವಕಲ್ಯಾಣದ ಅಭಿವೃದ್ಧಿಯೇ ನನ್ನ ಗುರಿ. ಈ ಕ್ಷಣದಿಂದಲೇ ಕೋವಿಡ್ ತೊಲಗಿಸಲು ಹೋರಾಡುವೆ. ಸಂಕಷ್ಟದಲ್ಲಿದ್ದ ಜನರ ಮನೆ ಬಾಗಿಲಿಗೆ ಹೋಗುವೆ ಎಂದು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಹೇಳಿದ್ದಾರೆ.
13:14 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: 41ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 2679 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 41 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 209841 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 212520 ಮತಗಳನ್ನು ಪಡೆದುಕೊಂಡಿದ್ದಾರೆ.
13:01 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವು
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20,904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿ 12 ಜನ ಸ್ಪರ್ಧಿಸಿದ್ದರು. 70,556 ಮತಗಳನ್ನು ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪಡೆದಿದ್ದಾರೆ.
12:57 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 27 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 15,708 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 58009, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 42301, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 10583 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 8359 ಮತಗಳನ್ನು ಪಡೆದುಕೊಂಡಿದ್ದಾರೆ.
12:37 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 23 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 15,708 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 58009, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 42301, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 10583 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 8359 ಮತಗಳನ್ನು ಪಡೆದುಕೊಂಡಿದ್ದಾರೆ.
12:25 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 21 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 13,392 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 52668, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 39276, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 10251 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 7969 ಮತಗಳನ್ನು ಪಡೆದುಕೊಂಡಿದ್ದಾರೆ.
12:24 May 02
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 5709 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 36 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,87,919 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,82,210 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 49,570 ಮತಗಳನ್ನು ಪಡೆದಿದ್ದಾರೆ.
12:17 May 02
ಎಲ್ಲೆಲ್ಲಿ ಯಾರಿಗೆ ಮುನ್ನಡೆ?
ಬೆಳಗಾವಿ- 35ನೇ ಸುತ್ತಿನಲ್ಲಿ ಬಿಜೆಪಿಗೆ 65,93 ಮತಗಳ ಮುನ್ನಡೆ
ಮಸ್ಕಿ- 13ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 16,318 ಮತಗಳ ಮುನ್ನಡೆ
ಬಸವಕಲ್ಯಾಣ- 19ನೇ ಸುತ್ತಿನಲ್ಲಿ ಬಿಜೆಪಿಗೆ 14,188 ಮತ ಮುನ್ನಡೆ
12:15 May 02
ಬೆಳಗಾವಿ ಲೋಕಸಭಾ ಉಪಚುನಾವಣೆ, 6593 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 6593 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 35 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,82,766 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,76,173 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 49,777 ಮತಗಳನ್ನು ಪಡೆದಿದ್ದಾರೆ.
12:14 May 02
ಬಸವಕಲ್ಯಾಣದಲ್ಲಿ 19 ನೇ ಸುತ್ತು ಮುಕ್ತಾಯ.. ಬಿಜೆಪಿ ಅಭ್ಯರ್ಥಿ ಶರಣು ಸಲಗರ 14188 ಮತಗಳ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 19 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 14188 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 47804, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 33616, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 10152 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 7550 ಮತಗಳನ್ನು ಪಡೆದುಕೊಂಡಿದ್ದಾರೆ.
12:00 May 02
ಬೆಳಗಾವಿಯಲ್ಲಿ 11,390 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 11,390 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 32 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,65,851 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,54,461 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 42,682 ಮತಗಳನ್ನು ಪಡೆದಿದ್ದಾರೆ.
11:54 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 18 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 13044 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 44614, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 31570, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 10052 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 7293 ಮತಗಳನ್ನು ಪಡೆದುಕೊಂಡಿದ್ದಾರೆ.
11:52 May 02
"ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ, ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ"
-
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021 " class="align-text-top noRightClick twitterSection" data="
">ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021
ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಸೋಲು ಬಹುತೇಕ ಖಚಿತಗೊಂಡ ಕಾರಣ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, "ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ." ಎಂದಿದ್ದಾರೆ.
11:47 May 02
ಬೆಳಗಾವಿ ಲೋಕಸಭಾ ಉಪಚುನಾವಣೆ; 31 ನೇ ಸುತ್ತಿನ ಬಳಿಕವೂ ಮಂಗಳಾ ಮೇಲುಗೈ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 13,885 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 31 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,57,892 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,44,007 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 41,600 ಮತಗಳನ್ನು ಪಡೆದಿದ್ದಾರೆ.
11:39 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 16 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 11593 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 38999, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 27406, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 9509 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 6655 ಮತಗಳನ್ನು ಪಡೆದುಕೊಂಡಿದ್ದಾರೆ.
11:36 May 02
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 13,703 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 30 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,53,839 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,40,136 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 40,087 ಮತಗಳನ್ನು ಪಡೆದಿದ್ದಾರೆ.
11:34 May 02
ಮಸ್ಕಿ ವಿಧಾನಸಭಾ ಉಪ ಚುನಾವಣೆ: 16318 ಮತಗಳಿಂದ ಮುನ್ನಡೆ ಕಾಯ್ದುಕೊಂಡ ಕೈ ಅಭ್ಯರ್ಥಿ
ರಾಯಚೂರು: ಮಸ್ಕಿ ವಿಧಾನಸಭಾ ಉಪ ಚುನಾವಣೆಯ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. 13ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 16318 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
11:32 May 02
ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಶರಣು ಸಲಗರ 8,223 ಮತಗಳ ಮುನ್ನ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 14 ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 8,223 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 32790, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 24567, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 9253 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 5972 ಮತಗಳನ್ನು ಪಡೆದುಕೊಂಡಿದ್ದಾರೆ.
11:32 May 02
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 11,831 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 11,831 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 26ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,35,609 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,23,778 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 35,240 ಮತಗಳನ್ನು ಪಡೆದಿದ್ದಾರೆ.
11:23 May 02
ಅಣ್ಣನ ಕ್ಷೇತ್ರದಲ್ಲಿ ಹಿನ್ನಡೆ, ತಮ್ಮನೂರಿನಲ್ಲಿ ಮುನ್ನಡೆ.. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಎಂಇಎಸ್ ಮೇಲು
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ತಮ್ಮ ಬಾಲಚಂದ್ರ ಜಾರಕಿಹೊಳಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ 2,585 ಮತಗಳಿಂದ ಸತೀಶ್ ಜಾರಕಿಹೊಳಿಗೆ ಮುನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 14501, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 17086 ಮತ ಪಡೆದಿದ್ದಾರೆ.
ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ 15537 ಮತಗಳನ್ನ ಪಡೆದಿದ್ದು, ಬಿಜೆಪಿ 8746, ಕಾಂಗ್ರೆಸ್ 7960 ಮತಗಳನ್ನು ಪಡೆದಿದೆ.
ಅಣ್ಣ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ತಮ್ಮ ಸತೀಶ್ ಜಾರಕಿಹೊಳಿಗೆ ಹಿನ್ನಡೆಯಾಗಿದ್ದು, ರಮೇಶ್ ಜಾರಕಿಹೊಳಿ ಕ್ಷೇತ್ರ ಗೋಕಾಕ್ನಲ್ಲಿ 6466 ಮತಗಳಿಂದ ಬಿಜೆಪಿಗೆ ಮುನ್ನಡೆಯಾಗಿದೆ. ಬಿಜೆಪಿ 22782, ಕಾಂಗ್ರೆಸ್ 16336 ಮತಗಳನ್ನು ಪಡೆದಿವೆ.
11:20 May 02
ಬೆಳಗಾವಿಯಲ್ಲಿ 26ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 11,831 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 25ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,35,609 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,23,778 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 35,240 ಮತಗಳನ್ನು ಪಡೆದಿದ್ದಾರೆ.
11:13 May 02
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 10,335 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 25ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,27,623 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 1,17,288 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 32,703 ಮತಗಳನ್ನು ಪಡೆದಿದ್ದಾರೆ.
11:09 May 02
ಎಲ್ಲೆಲ್ಲಿ ಯಾರಿಗೆ ಮುನ್ನಡೆ?
ಬೆಳಗಾವಿ – 25ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 10,335 ಮತಗಳ ಮುನ್ನಡೆ
ಮಸ್ಕಿ – 9ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 10,996 ಮತಗಳ ಮುನ್ನಡೆ
ಬಸವಕಲ್ಯಾಣ – 9ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 7355 ಮತಗಳ ಮುನ್ನಡೆ
10:47 May 02
ಬಿಜೆಪಿ ಅಭ್ಯರ್ಥಿ ಶರಣು ಸಲಗರ 7355 ಮತಗಳ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 9ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 7355 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 23354, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 15999, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 4051 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 3149 ಮತಗಳನ್ನು ಪಡೆದುಕೊಂಡಿದ್ದಾರೆ.
10:46 May 02
ಮಸ್ಕಿ ವಿಧಾನಸಭಾ ಉಪ ಚುನಾವಣೆ: 9ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಉಪ ಚುನಾವಣೆಯ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. 9ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 10,996 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 29,374 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 18,378 ಮತಗಳು ಬಿದ್ದಿವೆ.
10:38 May 02
8ನೇ ಸುತ್ತಿನಲ್ಲಿ 8122 ಮತಗಳ ಅಂತರದಿಂದ ಬಿಜೆಪಿ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 8ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 7966 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 22063, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 14097, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 2488 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 2838 ಮತಗಳನ್ನು ಪಡೆದುಕೊಂಡಿದ್ದಾರೆ.
10:35 May 02
ಬೆಳಗಾವಿಯಲ್ಲಿ 6080 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 6080 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 24ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 92,776 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 86,690 ಮತಗಳನ್ನು ಪಡೆದುಕೊಂಡಿದ್ದಾರೆ.
10:28 May 02
ಮಸ್ಕಿ ವಿಧಾನಸಭಾ ಉಪ ಚುನಾವಣೆಯ 8ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಉಪ ಚುನಾವಣೆಯ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. 8ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 9,303 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 25,587 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 16,284 ಮತಗಳು ಬಿದ್ದಿವೆ.
10:28 May 02
ಐದನೇಯ ಸುತ್ತಿನಲ್ಲಿ 8122 ಮತಗಳ ಅಂತರದಿಂದ ಬಿಜೆಪಿ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 6ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 8122 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 18004, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 9882, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 1304 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 2030 ಮತಗಳನ್ನು ಪಡೆದುಕೊಂಡಿದ್ದಾರೆ.
10:25 May 02
ಬೆಳಗಾವಿಯಲ್ಲಿ 23 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗೆ 3719 ಮತಗಳ ಮುನ್ನಡೆ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 3719 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 23 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 81,108 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 77,389 ಮತಗಳನ್ನು ಪಡೆದುಕೊಂಡಿದ್ದಾರೆ.
10:20 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 4ನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 5732 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 12023, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 6291, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 1047 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 1491 ಮತಗಳನ್ನು ಪಡೆದುಕೊಂಡಿದ್ದಾರೆ.
10:12 May 02
ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದವರು:
ಬೆಳಗಾವಿ ಲೋಕಸಭೆ – 22ನೇ ಸುತ್ತಿನಲ್ಲಿ 2,676 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಮಸ್ಕಿ – 7ನೇ ಸುತ್ತಿನಲ್ಲಿ ಕಾಂಗ್ರೆಸ್‌ಗೆ 8,551 ಮತಗಳಿಂದ ಮುನ್ನಡೆ
ಬಸವಕಲ್ಯಾಣ – 3ನೇ ಸುತ್ತಿನಲ್ಲಿ ಬಿಜೆಪಿಗೆ 4,434 ಮತಗಳ ಮುನ್ನಡೆ
10:09 May 02
ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಉಪ ಚುನಾವಣೆಯ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. 7ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 8,551 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 22,624 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲಗೆ 14,733 ಮತಗಳು ಬಿದ್ದಿವೆ.
10:06 May 02
ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮೂರನೇ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 4434 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 9282, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 4848, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 808 ಮತಗಳನ್ನು ಪಡೆದುಕೊಂಡಿದ್ದಾರೆ.
10:00 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: 22 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 2676 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 22 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 58,776 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 56,100 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ 17671 ಮತಗಳನ್ನು ಪಡೆದಿದ್ದಾರೆ.
09:55 May 02
ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಶರಣು ಸಲಗರ 3252 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯ ಶರಣು ಸಲಗರ 6440, ಕಾಂಗ್ರೆಸ್‌ನ ಮಾಲಾ ಬಿ.ನಾರಾಯಣರಾವ್ 3188, ಜೆಡಿಎಸ್‌ನ ಸೈಯದ್ ಯಸ್ರಬ್ ಅಲಿಖಾದ್ರಿ 549 ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 618 ಮತಗಳನ್ನು ಪಡೆದುಕೊಂಡಿದ್ದಾರೆ.
09:49 May 02
ಬೆಳಗಾವಿ ಲೋಕಸಭಾ ಉಪಚುನಾವಣೆ: 3,446 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ 3,446 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 20ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 53,538 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 50,072 ಮತಗಳನ್ನು ಪಡೆದುಕೊಂಡಿದ್ದಾರೆ.
09:47 May 02
ಮಸ್ಕಿ ವಿಧಾನಸಭಾ ಉಪ ಚುನಾವಣೆ; 4ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಉಪ ಚುನಾವಣೆಯ 4ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. 4ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 1,477 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 3,121 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 1,644 ಮತಗಳು ಬಿದ್ದಿವೆ.
09:42 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: 12ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 278 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. 12ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 36,423 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 36,145 ಮತಗಳನ್ನು ಪಡೆದುಕೊಂಡಿದ್ದಾರೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 278 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
09:38 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಹತ್ತನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 1539 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಹತ್ತನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 28,284 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 29,863 ಮತಗಳನ್ನು ಪಡೆದುಕೊಂಡಿದ್ದಾರೆ. ಎಂಇಎಸ್ ಅಭ್ಯರ್ಥಿ 7990 ಮತಗಲನ್ನು ಪಡೆದಿದ್ದಾರೆ.
09:38 May 02
ಮಸ್ಕಿ ವಿಧಾನಸಭಾ ಚುನಾವಣೆ: 3ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಚುನಾವಣೆಯ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 1,498 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 3585 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಬಂದ ಮತಗಳು 2087 ಮತಗಳು ಬಿದ್ದಿವೆ. ಮೂರು ಸುತ್ತಿನಲ್ಲಿ ಕಾಂಗ್ರೆಸ್‌ನ ಒಟ್ಟು ಮತಗಳ 9756, ಬಿಜೆಪಿಗೆ 7406 ಮತಗಳು ಬಿದ್ದಿವೆ
09:28 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಏಳನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 1735 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಏಳನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 19,156 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 20,891 ಮತಗಳನ್ನು ಪಡೆದುಕೊಂಡಿದ್ದಾರೆ.
09:25 May 02
ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ
ಬೀದರ್: ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ 2172 ಮತಗಳ ಮುನ್ನಡೆ ಸಾಧಿಸಿದ್ದಾರೆ.
09:22 May 02
ಬೆಳಗಾವಿ : ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 3586 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಆರನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 14,418 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 18,004 ಮತಗಳನ್ನು ಪಡೆದುಕೊಂಡಿದ್ದಾರೆ.
09:12 May 02
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 84 ಮತಗಳಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ನಗರದ ಆರ್ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 5,563 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 5,479 ಮತಗಳನ್ನು ಪಡೆದುಕೊಂಡಿದ್ದಾರೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 84 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
08:56 May 02
ಮಸ್ಕಿಯಲ್ಲಿ 1,368 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ಉಪಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ 6,171 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 4,803 ಮತಗಳನ್ನು ಪಡೆದಿದ್ದಾರೆ. 1,368 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ ಮುನ್ನಡೆ ಸಾಧಿಸಿದ್ದಾರೆ.
08:47 May 02
ರಾಯಚೂರು: ಪಿಪಿಇ ಕಿಟ್ ಧರಿಸಿ ಬಂದ ಏಜೆಂಟ್ಗಳು
ರಾಯಚೂರು: ನಗರದ ಎಸ್ಆರ್ಪಿಎಸ್ ಕಾಲೇಜಿನಲ್ಲಿ 12 ಟೇಬಲ್ ಗಳಲ್ಲಿ ಮತ ಎಣಿಕೆ ಆರಂಭಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ವಿವಿಧ ಪಕ್ಷಗಳಿಂದ ಬಂದಿರುವ ಏಜೆಂಟ್ರಿಗೆ ಪಿಪಿಇ ಕಿಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿರುವ 210 ಸಿಬ್ಬಂದಿಗೂ ಕೋವಿಡ್ ತಪಾಸಣೆ ಕಡ್ಡಾಯಗೊಳಿಸಲಾಗಿತ್ತು. ನೆಗೆಟಿವ್ ವರದಿ ಇದ್ದವರು ಮಾತ್ರ ಮತ ಎಣಿಕೆಯಲ್ಲಿ ಭಾಗಿಯಾಗಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಪೆಟ್ಟಿಗೆಗಳನ್ನು ಪಡೆಯಲಾಯಿತು.
08:12 May 02
ಮಸ್ಕಿ ಉಪ ಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ 319 ಮತಗಳ ಮುನ್ನಡೆ ಸಾಧಿಸಿದ್ದಾರೆ.
07:45 May 02
ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ತೆರೆಯುವ ವಿಚಾರಕ್ಕೆ ಗೊಂದಲ
ಬೆಳಗಾವಿ: ಬೆಳಗ್ಗೆ 8 ಗಂಟೆಯಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಜಿಲ್ಲಾ ಚುನಾವಣಾ ಅಧಿಕಾರಿ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಡಾ.ಕೆ.ಹರೀಶ್‌ಕುಮಾರ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಬಾಗಿಲು ತೆರೆಯಲಾಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತಎಣಿಕೆ ಆರಂಭದಲ್ಲೇ ಗೊಂದಲ ಸೃಷ್ಟಿಯಾಯಿತು. ಸ್ಟ್ರಾಂಗ್ ರೂಮ್ ಓಪನ್ ಮಾಡುವ ವಿಚಾರಕ್ಕೆ ಗೊಂದಲ ಉಂಟಾಗಿತ್ತು. ಮೊದಲು ಓಪನ್ ಮಾಡುವ ಸ್ಟ್ರಾಂಗ್ ರೂಮ್ ಯಾವುದು ಎಂಬ ವಿಚಾರವಾಗಿ ಚರ್ಚೆ ನಡೆಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಕ ಸ್ಟ್ರಾಂಗ್ ರೂಮ್ ಇವೆ. ಯಾವ ಸ್ಟ್ರಾಂಗ್ ರೂಮ್ ಓಪನ್ ಮಾಡಬೇಕು ಎಂಬ ಗೊಂದಲ ಚುನಾವಣಾ ಸಿಬ್ಬಂದಿಗೆ ಎದುರಾಗಿತ್ತು. ಡಿಸಿ ಡಾ.ಕೆ.ಹರೀಶ್‌ಕುಮಾರ್ ಆಗಮಿಸಿದರೂ ಸ್ಟ್ರಾಂಗ್ ರೂಮ್ ಓಪನ್ ಮಾಡುವ ಸಿಬ್ಬಂದಿ ಬಾರದ ಹಿನ್ನೆಲೆ ಚುನಾವಣಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ತರಾಟೆ ತೆಗದುಕೊಂಡರು.
06:46 May 02
ಕರ್ನಾಟಕ ಉಪಸಮರ: ಯಾರಿಗೆ ವಿಜಯಮಾಲೆ?
ಬೆಳಗಾವಿ/ರಾಯಚೂರು/ಬೀದರ್: ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿಗಳೊಂದಿಗೆ ನಡೆಯಲಿದೆ.
ಬೆಳಗಾವಿ ಕದನ ಕುತೂಹಲ
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಾಕ್ಷಿಯಾಗಿತ್ತು. ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಕಣದಲ್ಲಿದ್ದರೆ, ಕೇಂದ್ರದ ಮಾಜಿ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಬಿಜೆಪಿಯಿಂದ ಅಖಾಡದಲ್ಲಿದ್ದಾರೆ.
ಮಸ್ಕಿಯಲ್ಲಿ ಪೈಪೋಟಿ
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ ಹಾಗೂ ಕಾಂಗ್ರೆಸ್‌ನಿಂದ ಬಸವನಗೌಡ ತುರವಿಹಾಳ ಸೇರಿ ಒಟ್ಟು ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಬಸವಕಲ್ಯಾಣ
ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ಬಿ.ನಾರಾಯಣರಾವ್, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿಖಾದ್ರಿ ಹಾಗು ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳಿದ್ದಾರೆ.
ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಮತದಾನ ನಡೆದಿತ್ತು.
ಸಮೀಕ್ಷೆಗಳ ಭವಿಷ್ಯವಾಣಿ
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಗಳಿಸಲಿದ್ದಾರೆ. ಆದರೆ ಮಸ್ಕಿಯಲ್ಲಿ ಮಾತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಫಲಿತಾಂಶ 50:50 ಇದೆ ಎಂದು ಹೇಳಲಾಗಿದೆ.