ETV Bharat / state

ಗ್ರಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ: ಈಶ್ವರ ಖಂಡ್ರೆ

ಗ್ರಾಪಂ ಚುನಾವಣೆ ನಿಮಿತ್ತ ಕಾಂಗ್ರೆಸ್ ಪಕ್ಷದಿಂದ ನಗರದ ಸಾಹಿಲ್ ಫಂಕ್ಷನ್​ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

KPCC president Ishwar Khandre
ಪೂರ್ವ ಸಿದ್ಧತಾ ಸಭೆ
author img

By

Published : Dec 16, 2020, 8:52 AM IST

ಬಸವಕಲ್ಯಾಣ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್​ಗಳ ಪಾತ್ರ ಮಹತ್ವದ್ದಾಗಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

ಗ್ರಾಪಂ ಚುನಾವಣೆ ನಿಮಿತ್ತ ಕಾಂಗ್ರೆಸ್ ಪಕ್ಷದಿಂದ ನಗರದ ಸಾಹಿಲ್ ಫಂಕ್ಷನ್​ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಪೂರ್ವ ಸಿದ್ಧತಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ನಡೆಯಲಿರುವ 26 ಗ್ರಾ.ಪಂ. ಗಳ 513 ಸ್ಥಾನಗಳಲ್ಲಿ ಕನಿಷ್ಠ 400ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಅಧಿಕಾರ ವಿಕೇಂದ್ರೀಕರಣಗೊಳಿಸಿ ಗ್ರಾ.ಪಂ.ಗಳಿಗೆ ಬಲ ತಂದು ಕೊಟ್ಟ ಶ್ರೇಯಸ್ಸು ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಅವರಿಗೆ ಸಲ್ಲುತ್ತದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ ನೀಡಿ ಸದೃಢಗೊಳಿಸಿದ್ದು, ಉದ್ಯೋಗ ಖಾತ್ರಿ ಯೋಜನೆ ಮೂಲಕ ಕೃಷಿ, ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿದ ಶ್ರೇಯಸ್ಸು ಪಕ್ಷಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟು, ಪಕ್ಷದ ಅಭ್ಯರ್ಥಿ ಪರ ಮತ ಕೇಳಬೇಕು ಎಂದು ಸಲಹೆ ನೀಡಿದರು.

ಓದಿ: ಗ್ರಾ.ಪಂ.ಚುನಾವಣೆ; 2ನೇ ಹಂತದ ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಮಾಜಿ ಎಂಎಲ್‌ಸಿ ತಿಪ್ಪಣ್ಣ ಕಮಕನೂರ ಮಾತನಾಡಿ, ಗ್ರಾ.ಪಂ. ಚುನಾವಣೆ ಮುಂದಿನ ಎಲ್ಲಾ ಚುನಾವಣೆಗಳಿಗೂ ದಿಕ್ಸೂಚಿ. ಹೀಗಾಗಿ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಬೇಕು. ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಶಾಸಕರನ್ನು ಗೆಲ್ಲಿಸುವ ಮೂಲಕ ಈಶ್ವರ ಖಂಡ್ರೆ ಅವರು ಇನ್ನೂ ಪ್ರಬಲ ನಾಯಕನಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಪಂಚಾಯತ್​ಗಳಲ್ಲಿ ಅವಿರೋಧವಾಗಿ ಆಯ್ಕೆಗೊಂಡ ಸದಸ್ಯರನ್ನು ಸನ್ಮಾನಿಸಲಾಯಿತು.

ಸಾಹಿಲ್ ಫಂಕ್ಷನ್​ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಮುಂಬರುವ ಕೆಲವೇ ದಿನಗಳಲ್ಲಿ ನಡೆಯಲಿರುವ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳಿಗೆ ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ತಲಾ ಒಂದು ಗ್ರಾಮ ಪಂಚಾಯತ್​ಗೆ ಉಸ್ತುವಾರಿ ವಹಿಸುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.