ETV Bharat / state

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸರ್ಕಾರ ವಿಫಲ: ಖಂಡ್ರೆ ಖಂಡನೆ

ಕುವೈತ್​ನಲ್ಲಿ ಸುಮಾರು 200ಕ್ಕೂ ಹೆಚ್ಚು ಯುವಕರು ಸಿಲುಕಿದ್ದಾರೆ. ಅವರ ವಿಸಾ ಅವಧಿ ಮುಗಿದು ನಾಲ್ಕು ತಿಂಗಳಾಗಿದ್ದು, ಊಟ-ತಿಂಡಿ ಸಿಗದೆ ಪರದಾಡುತ್ತಿದ್ದಾರೆ. ಸರ್ಕಾರ ಅವರನ್ನು ವಿಶೇಷ ವಿಮಾನದ ಮೂಲಕ ವಾಪಸ್​ ಕರೆಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

KPCC  vice President Ishwar Khandre statement
ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಈಶ್ವರ ಖಂಡ್ರೆ
author img

By

Published : Aug 2, 2020, 6:33 PM IST

ಬೀದರ್: ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್​ ಕರೆತರುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಈಶ್ವರ ಖಂಡ್ರೆ

ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಕುವೈತ್​ನಲ್ಲಿ ಸುಮಾರು 200ಕ್ಕೂ ಹೆಚ್ಚು ಯುವಕರು ಸಿಲುಕಿದ್ದಾರೆ. ಅವರ ವಿಸಾ ಅವಧಿ ಮುಗಿದು ನಾಲ್ಕು ತಿಂಗಳಾಗಿದ್ದು, ಅವರಿಗೆ ಅಲ್ಲಿ ಕೆಲಸವು ಸಿಗುತ್ತಿಲ್ಲ. ಊಟ-ತಿಂಡಿ ಸಿಗದೆ ಪರದಾಡುತ್ತಿದ್ದಾರೆ. ಸರ್ಕಾರ ಅವರನ್ನು ವಿಶೇಷ ವಿಮಾನದ ಮೂಲಕ ವಾಪಸ್​ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಹೈದ್ರಾಬಾದ್​ನ ಮೇಘಾ ಇನ್ಫಾಸ್ಟ್ರಕ್ಚರ್ ಕಂಪನಿ ಸೇರಿದಂತೆ ಮುಂಬೈ ಮೂಲದ ಕಂಪನಿಯ ಬೋಗಸ್ ಟಿಕೆಟ್ ನೀಡಿ ವಂಚನೆ ಮಾಡುತ್ತಿದ್ದಾರೆ. ವಿದೇಶದಲ್ಲಿ ಸಿಲುಕಿರುವ ಕಾರ್ಮಿಕರು ವಿಡಿಯೋ ಮಾಡಿ ಕಣ್ಣಿರು ಹಾಕುತ್ತಿದ್ದಾರೆ‌. ನಮ್ಮವರು ಸಂಕಷ್ಟಕ್ಕೆ ಸಿಲುಕಿದಾಗ ಸರ್ಕಾರ ಏನು ಮಾಡುತ್ತಿದೆ ಎಂದು ಖಂಡ್ರೆ ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಒಂದೇ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಲಾಕ್​ಡೌನ್ ಸಂದರ್ಭದಲ್ಲಿ ವಿದೇಶದಲ್ಲಿ ಸಿಲುಕಿದ್ದ ತಮ್ಮ ಜನರನ್ನು ಕೇರಳ ಸರ್ಕಾರ ವಾಪಾಸ್​ ಕರೆಸಿಕೊಂಡಿದೆ. ಅನ್ಯರಾಜ್ಯಗಳ ವಲಸಿಗರು ಭಾರತಕ್ಕೆ ವಾಪಸ್ಸಾಗಿದ್ದಾರೆ. ಆದರೆ, ನಮ್ಮ ರಾಜ್ಯಸರ್ಕಾರ ಯಾಕೆ ತಾರತಮ್ಯ ನೀತಿ ಅನುಸರಿಸುತ್ತಿದೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.