ETV Bharat / state

ಉಜಳಂಬ ಗ್ರಾಮದಲ್ಲಿ ಸಿಎಂ ವಾಸ್ತವ್ಯ: ಎತ್ತಿನ ಗಾಡಿಯಲ್ಲಿ ಅದ್ಧೂರಿ ಸ್ವಾಗತ..! - etv bharat

ಗಡಿ ಭಾಗ ಬವಕಲ್ಯಾಣದ ಉಜಳಂಬ ಗ್ರಾಮದಲ್ಲಿ ಕುಮಾರಸ್ವಾಮಿ ಇಂದು ಗ್ರಾಮ ವಾಸ್ತವ್ಯ ಹೂಡಿದ್ದಾರೆ. ರಾಯಚೂರು ಜಿಲ್ಲೆಯ ಕರೆಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮುಗಿಸಿದ ಕುಮಾರಸ್ವಾಮಿ, ಗಡಿ ಜಿಲ್ಲೆಗೆ ಆಗಮಿಸುತ್ತಿದ್ದಂತೆ ರೈತರು ಅವರನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿ ಭವ್ಯ ಸ್ವಾಗತ ಕೋರಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಹಲವಡೆ ಅದ್ಧೂರಿ ಸ್ವಾಗತ
author img

By

Published : Jun 27, 2019, 9:19 PM IST

ಬೀದರ್: ಗಡಿ ಭಾಗ ಬವಕಲ್ಯಾಣದ ಉಜಳಂಬ ಗ್ರಾಮದಲ್ಲಿ ಕುಮಾರಸ್ವಾಮಿ ಇಂದು ಗ್ರಾಮ ವಾಸ್ತವ್ಯ ಹೂಡಿದ್ದಾರೆ. ರಾಯಚೂರು ಜಿಲ್ಲೆಯ ಕರೆಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮುಗಿಸಿದ ಕುಮಾರಸ್ವಾಮಿ, ಗಡಿ ಜಿಲ್ಲೆಗೆ ಆಗಮಿಸುತ್ತಿದ್ದಂತೆ ರೈತರು ಅವರನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿ ಭವ್ಯ ಸ್ವಾಗತ ಕೋರಿದರು.

ರಾಯಚೂರಿನಿಂದ ರಸ್ತೆ ಮಾರ್ಗವಾಗಿ ಆಗಮಿಸಿದ ಅವರು, ನೇರವಾಗಿ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ ಬಸವಕಲ್ಯಾಣದ ಚಿಲ್ಲಾ ಗಲ್ಲಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇದೇ ವೇಳೆ 24 ಲಕ್ಷ ರೂ. ಚಕ್ ಸಹ ವಿತರಿಸಿದರು.

ಬಳಿಕ ಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ, ಬರೋಬ್ಬರಿ 34 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರವನ್ನ ಕೆಡವಲು ನನ್ನ ಹಳೆಯ ಸ್ನೇಹಿತರು ಸಾಕಷ್ಟು ಪ್ರಯತ್ನ ಪಟ್ಟರು. ಈಗಲೂ ಪಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರು.

ಉಜಳಂಬ ಗ್ರಾಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಎತ್ತಿನ ಗಾಡಿಯಲ್ಲಿ ಅದ್ಧೂರಿ ಸ್ವಾಗತ ಕೋರಿದ ರೈತರು.

ಇನ್ನು ಇದಕ್ಕೂ ಮುನ್ನ ಮಾತನಾಡಿದ ಬಸವಕಲ್ಯಾಣ ಶಾಸಕ ಬಿ.ನಾರಾಯಣ್, ಕಳೆದ ಒಂದು ವರ್ಷದಿಂದ ಮೈತ್ರಿ ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಾ ತಿರುಗಾಡುತ್ತಿದ್ದಾರೆ. 30 ವರ್ಷಗಳ ಬಳಿಕ ನಾನು ಮೊದಲ ಬಾರಿ ಶಾಸಕನಾಗಿದ್ದೇನೆ.

ಐದು ವರ್ಷವಾದರೂ ನನಗೆ ಶಾಸಕನಾಗಿರಲು ಬಿಡಿ. ಸರ್ಕಾರವನ್ನು ಬೀಳಿಸುವ ಕೆಲಸ ಮಾಡಬೇಡಿ. ನಾನು ಐದು ವರ್ಷ ಶಾಸಕನಾಗಿರಲು ಹಾಗೂ ಮೈತ್ರಿ ಸರ್ಕಾರ 5 ವರ್ಷ ಪೂರೈಸುವಂತಾಗಿಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರತಿಪಕ್ಷ ನಾಯಕರ ನಡೆಗೆ ಹಿಡಿಶಾಪ ಹಾಕಿದರು.

ಇನ್ನು ಇದೇ ಶಾಲಾ ಆವರಣದಲ್ಲಿ ಮುಖ್ಯಮಂತ್ರಿ ಜನತಾ ದರ್ಶನ ನಡೆಸಿ ಸಾವಿರಾರು ಜನರ ಅಹವಾಲುಗಳನ್ನ ಸ್ವೀಕರಿಸಿದರು. ಕೆಲ ಕಾಲ ರೈತರು ಮುಖ್ಯಮಂತ್ರಿಗಳನ್ನ ಭೇಟಿ ಮಾಡಲೇಬೇಕು ಎಂದು ಪಟ್ಟು ಹಿಡಿದರು. ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡದ ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡೆಸಿದರು. ಇದಾದ ಬಳಿಕ ಸಿಎಂ ನೆರೆದಿದ್ದ ಮೈದಾನದ ಬಳಿ ಆಗಮಿಸಿ ರೈತರು ಕೆಲಕಾಲ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರೈತರ ಒತ್ತಾಯಕ್ಕೆ ಮಣಿದ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರನ್ನ ಸಮಾಧಾನ ಪಡೆಸಿ ಕಳುಹಿಸಿದರು.

Intro:Body:

1 cm bidar.txt   

close

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.